ಪುರಾಣ ವಾಚನ-ಪ್ರವಚನ ಸಂಪನ್ನ

purana
Published on

ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಪ್ರವಚನ ಮಂಟಪದಲ್ಲಿ ಎರಡು ತಿಂಗಳು ನಡೆದ ಪುರಾಣ ವಾಚನ-ಪ್ರವಚನ ಸಂಪನ್ನಗೊಂಡಿತು.

ಎರಡು ತಿಂಗಳು ಪ್ರತಿದಿನ ಸಂಜೆ ಗಂಟೆ 6 ರಿಂದ ರಾತ್ರಿ ಗಂಟೆ 8ರ ವರೆಗೆ ನಡೆದ ಕಾರ್ಯಕ್ರಮದಲ್ಲಿ ಊರಿನ ನಾಗರಿಕರು ಹಾಗೂ ಕ್ಷೇತ್ರಕ್ಕೆ ಬಂದ ಭಕ್ತರು ಭಾಗವಹಿಸಿ ಆಸ್ವಾದಿಸಿದರು. ಪುರಾಣ ವಾಚನದಲ್ಲಿ 14 ಮಂದಿ ಹಾಗೂ ಪ್ರವಚನದಲ್ಲಿ 20 ಮಂದಿ ವಿದ್ವಾಂಸರು ಭಾಗವಹಿಸಿದ್ದರು.

ಸಮಾರೋಪ ಸಮಾರಂಭದಲ್ಲಿ ಸುಪ್ರೀತಾ ಕೋರ್ನಾಯ ವಾಚನ ಮಾಡಿದರು. ಅಶೋಕ ಭಟ್ ಪ್ರವಚನ ನೀಡಿದರು. ಸಮಾರೋಪ ಸಮಾರಂಭದಲ್ಲಿ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅವರು ಪುರಾಣ ವಾಚನ-ಪ್ರವಚನದಲ್ಲಿ ಭಾಗವಹಿಸಿದ ಎಲ್ಲರನ್ನೂ ಅಭಿನಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net