

ಕುಂದಾಪುರ: ಮುಂಗಾರು ಋತುವಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಭತ್ತ ಖರೀದಿಸಲು ಜಿಲ್ಲಾಡಳಿತ ಮುಂದಾಗಿದ್ದು, ಭತ್ತ ಖರೀದಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ. ಈ ಸಂಬಂಧ ಟಾಸ್ಕ್ಫೋರ್ಸ್ ಸಭೆ ನಡೆಸಲಾಗಿದೆ.
ಸಾವಾನ್ಯ ಭತ್ತಕ್ಕೆ 2369 ರೂ., ಗ್ರೇಡ್ ಎ ಭತ್ತಕ್ಕೆ 2389 ರೂ. ನಿಗದಿ ಮಾಡಲಾಗಿದೆ. ಉಡುಪಿ ಮತ್ತು ಕಾರ್ಕಳದ ಎಪಿಎಂಸಿ ಯಾರ್ಡ್ ಹಾಗೂ ಕೋಟೇಶ್ವರದ ಗೋದಾಮಿನಲ್ಲಿ ಭತ್ತ ಖರೀದಿ ಕೇಂದ್ರ ತೆರೆಯಲಾಗುತ್ತದೆ. ರೈತರು ಬೆಳೆದಿರುವ ಭತ್ತಕ್ಕೆ ಕೃಷಿ ಇಲಾಖೆಯಿಂದ ಜಾರಿಗೊಳಿಸಿರುವ ಕೃಷಿ ದತ್ತಾಂಶದಿಂದ ವಾಹಿತಿ ಪಡೆದು ಕೃಷಿ ಇಲಾಖೆ ಒದಗಿಸಿರುವ ಸರಾಸರಿ ಬೆಳೆ ವಾಹಿತಿಯನ್ವಯ ಹಾಗೂ ಕೇಂದ್ರ ಸರ್ಕಾರದ ವಾರ್ಗಸೂಚಿಯನ್ವಯ ಕನಿಷ್ಠ ಬೆಂಬಲ ಬೆಲೆಯಡಿ ನೋಂದಾಯಿತ ರೈತರಿಂದ ಭತ್ತ ಖರೀದಿಸಲಾಗುತ್ತದೆ. ಹಣವನ್ನು ರೈತರ ಬ್ಯಾಂಕ್ ಖಾತೆಗೆ ನೇರ ವರ್ಗಾವಣೆ ವಾಡುವಂತೆ ಸೂಚಿಸಲಾಗಿದೆ. ಪ್ರತಿ ರೈತರಿಂದ ಪ್ರತಿ ಎಕರೆಗೆ 25 ಕ್ವಿಂಟಾಲ್ನಂತೆ 50 ಕ್ವಿಂಟಾಲ್ ಖರೀದಿಸಲಾಗುತ್ತದೆ. ಭತ್ತವನ್ನು ಗೋದಾಮುಗಳಲ್ಲಿ ಸುರಕ್ಷಿತವಾಗಿ ಸಂಗ್ರಹಿಸಿ ಭತ್ತ ಖರೀದಿ ನೋಂದಣಿ ಬಗ್ಗೆ ರೈತ ಸಂಪರ್ಕ ಕೇಂದ್ರಗಳ ಮೂಲಕ ರೈತರಿಗೆ ವಾಹಿತಿ ನೀಡಬೇಕು ಎಂದು ಜಿಲ್ಲಾಡಳಿತ ಆದೇಶಿಸಿದೆ.
ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ ನೋಂದಣಿ ಕಾರ್ಯ ಆರಂಭಿಸಲಾಗಿದ್ದು ರೈತರು ಅ.31ರ ತನಕ ನೋಂದಣಿ ವಾಡಿಸಿಕೊಳ್ಳಬಹುದು ಎಂದು ಜಿಲ್ಲಾಧಿಕಾರಿ ಸೂಚಿಸಿದ್ದಾರೆ. ರೂಪಾ ವಾಡ್, ಕುಂದಾಪುರ ಕೃಷಿ ಇಲಾಖೆ ಸಹಾಯಕ ನಿರ್ದೇಶಕಿ