ಶಿವಸುಜ್ಞಾನ ಶ್ರೀಗಳಿಗೆ ಪೂರ್ಣಕುಂಭ ಸ್ವಾಗತ

goliyangadi
ಅನಂತ ಶ್ರೀ ವಿಭೂಷಿತ ಶಿವಸುಜ್ಞಾನ ತೀರ್ಥ ಮಹಾಸ್ವಾಮಿಜಿಯನ್ನು ಪೂರ್ಣಕುಂಭದೊಂದಿಗೆ ಸ್ವಾಗತಿಸಲಾಯಿತು.
Published on

ಗೋಳಿಯಂಗಡಿ: ಅನಂತ ಶ್ರೀ ವಿಭೂಷಿತ ಶಿವಸುಜ್ಞಾನ ತೀರ್ಥ ಮಹಾಸ್ವಾಮಿಜಿಯ 42ನೇ ಚಾತುರ್ಮಾಸ್ಯ ವ್ರತಾನುಷ್ಠಾನ ನಾಲ್ಕೂರು ಗ್ರಾಮದ ಕಜ್ಕೆ ಶಾಖಾಮಠ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ಜುಲೈ 21ರಿಂದ ಸೆಪ್ಟೆಂಬರ್ 18ರ ತನಕ ನಡೆಯಲಿದ್ದು, ಗೋಳಿಯಂಗಡಿ ವಿಶ್ವ ಬ್ರಾಹ್ಮಣ ಸಮಾಜೋದ್ಧಾರಕ ಸಂಘ ವತಿಯಿಂದ ಶ್ರೀಗಳನ್ನು ಪೂರ್ಣಕುಂಭದೊಂದಿಗೆ ಶನಿವಾರ ಸ್ವಾಗತಿಸಲಾಯಿತು. ಶ್ರೀಗಳು ಪುರ ಪ್ರವೇಶ, ಹೊರೆ ಕಾಣಿಕೆ ಮೆರವಣಿಗೆಗೆ ಚಾಲನೆ ನೀಡಿದರು. ಧಾರ್ಮಿಕ ಮುಖಂಡರು, ವಿಶ್ವ ಬ್ರಾಹ್ಮಣ ಸಮಾಜ ಸದಸ್ಯರು, ಭಕ್ತರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net