

ರಾಯಚೂರು: ಏಕಪಕ್ಷೀಯವಾಗಿ ವಿದ್ಯಾರ್ಥಿಗಳ ಮೇಲೆ ಹೇರಲಾಗಿರುವ ನಾಲ್ಕು ವರ್ಷಗಳ ಪದವಿ ಕೋರ್ಸ್ ಆದೇಶವನ್ನು ಹಿಂಪಡೆಯಬೇಕು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಸ್ಥಳೀಯ ಜಿಲ್ಲಾಕಾರಿ ಕಚೇರಿ ಮುಂದೆ ಎಐಡಿಎಸ್‌ಒದಿಂದ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.
ನಂತರ ಜಿಲ್ಲಾಕಾರಿ ಕಚೇರಿ ಕೇಂದ್ರ ಸ್ಥಾನಿಕ ಅಕಾರಿ ಪ್ರಶಾಂತಕುಮಾರಗೆ ಮನವಿ ಸಲ್ಲಿಸಿ, ಶಿಕ್ಷಣ ತಜ್ಞರ, ವಿದ್ಯಾರ್ಥಿಗಳ, ಶಿಕ್ಷಕರ ಅಭಿಪ್ರಾಯ ಪಡೆದ ಕೋವಿಡ್ ಸಂದರ್ಭದಲ್ಲಿ ಅಪ್ರಜಾತಾಂತ್ರಿಕವಾಗಿ ಎನ್‌ಇಪಿಯನ್ನು ವಿದ್ಯಾರ್ಥಿಗಳ ಹೇರಿಕೆ ಮಾಡಲಾಗಿದೆ ಎಂದು ದೂರಿದರು.
ಅಂದಿನ ಬಿಜೆಪಿ ರಾಜ್ಯ ಸರ್ಕಾರ ಕೇಂದ್ರ ಸರ್ಕಾರವನ್ನು ಮೆಚ್ಚಿಸಲು ಕರ್ನಾಟಕದಲ್ಲಿ ಪ್ರಥಮ ಬಾರಿಗೆ ಎನ್‌ಇಪಿಯನ್ನು ಜಾರಿಗೊಳಿಸಲಾಗಿದ್ದು, ಪದವಿ ಕೋರ್ಸ್‌ನ್ನು ನಾಲ್ಕು ವರ್ಷ ಎಂದು ಘೋಷಿಸಿರುವುದು ವಿದ್ಯಾರ್ಥಿ ವಿರೋ ನಿಲುವಾಗಿದೆ.
ರಾಜ್ಯದಲ್ಲಿ ಅಕಾರಕ್ಕೆ ಬಂದಿರುವ ಕಾಂಗ್ರೆಸ್ ತನ್ನ ಚುನಾವಣೆ ಪ್ರಣಾಳಿಕೆಯಲ್ಲಿ ಎನ್‌ಇಪಿ ಹಿಂಪಡೆಯುವುದಾಗಿ ಭರವಸೆ ನೀಡಿತ್ತು. ಆದರೆ ಅಕಾರಕ್ಕೆ ಬಂದು 10 ತಿಂಗಳು ಗತಿಸಿದರೂ ಈ ಬಗ್ಗೆ ಯಾವುದೇ ಕ್ರಮಕೈಗೊಂಡಿಲ್ಲ. ಕೆಲವು ತಿಂಗಳಲ್ಲಿ ಮೂರನೇ ವರ್ಷದ ಪದವಿ ಕೋರ್ಸ್ ಮುಗಿಯುತ್ತಿದ್ದು, ವಿದ್ಯಾರ್ಥಿಗಳು ಅತಂತ್ರ ಸ್ಥಿತಿಯಲ್ಲಿದ್ದು, ಕೂಡಲೇ ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಸಂಘಟನೆ ಜಿಲ್ಲಾಧ್ಯಕ್ಷ ಹಯ್ಯಳಪ್ಪ, ಕಾರ್ಯದರ್ಶಿ ಬಸವರಾಜ, ಪದಾಕಾರಿಗಳಾದ ಪೀರ್‌ಸಾಬ್, ಹೇಮಂತ್, ಅಮೋಘ, ವೀರೇಶ, ನಿತೀನ್, ಪಲ್ಲವಿ, ಅಂಬಿಕಾ, ಈರೇಶ್ ಪಾಲ್ಗೊಂಡಿದ್ದರು.