ಪ್ರಬಂಧ ಸ್ಪರ್ಧೆಯಲ್ಲಿ ಪೂರ್ವಿತಾ ಪ್ರಥಮ

dc
Published on

ಸುಳ್ಯ: ದ.ಕ ಜಿಲ್ಲಾಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ಆಲೆಟ್ಟಿ ಸರ್ಕಾರಿ ಪ್ರೌಢಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿನಿ ಪೂರ್ವಿತಾ ಕೆ.ವಿ.ಪ್ರಥಮ ಸ್ಥಾನಿಯಾಗಿದ್ದು ಬುಧವಾರ ಮಂಗಳೂರಿನಲ್ಲಿ ಗಾಂಧಿ ಜಯಂತಿ ಕಾರ್ಯಕ್ರಮದ ಸಮಾರಂಭದಲ್ಲಿ ಬಹುಮಾನ ಪಡೆದುಕೊಂಡರು. ದ.ಕ.ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಬಹುಮಾನ ಹಾಗೂ ಪ್ರಶಸ್ತಿ ಪತ್ರ ನೀಡಿ ಅಭಿನಂದಿಸಿದರು. ಈಕೆ ಆಲೆಟ್ಟಿ ಗ್ರಾಮದ ಕೂರ್ನಡ್ಕದ ವಿವೇಕಾನಂದ ಮತ್ತು ಕೃಷ್ಣವೇಣಿ ದಂಪತಿಯ ಪುತ್ರಿ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net