ಅಧಿಕಾರಿಗಳ ವರ್ಗಾವಣೆ ದಂಧೆಗೆ ಕಡಿವಾಣ ಹಾಕಿ

29-05-Shiva-2
ಅಧಿಕಾರಿಗಳ ವರ್ಗಾವಣೆ ದಂಧೆಯನ್ನು ತಡೆಯುವಂತೆ ಒತ್ತಾಯಿಸಿ ರಾಯಚೂರಿನ ಟಿಪ್ಪು ಸುಲ್ತಾನ್ ಉದ್ಯಾನವನದಲ್ಲಿ ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆಯಿಂದ ಬುಧವಾರ ಪ್ರತಿಭಟನೆ ನಡೆಸಲಾಯಿತು. ಸಂಘಟನೆ ಪದಾಕಾರಿಗಳಾದ ಗುರುರಾಜ, ಬಸವರಾಜ, ವಿದ್ಯಾ ಪಾಟೀಲ್, ಮೋಕ್ಷಮ್ಮ, ಶಾಂಭವಿ, ಈರಮ್ಮ, ಅಂಜಿನೇಯ, ಮಾರೆಮ್ಮ, ರಾಘವೇಂದ್ರ, ಮಲ್ಲಮ್ಮ, ರಂಗಮ್ಮ ಇದ್ದರು.
Published on

ರಾಯಚೂರು: ರಾಜ್ಯದಲ್ಲಿ ನಡೆಯುತ್ತಿರುವ ಅಧಿಕಾರಿಗಳ ವರ್ಗಾವಣೆ ದಂಧೆಗೆ ಕಡಿವಾಣ ಹಾಕುವಂತೆ ಒತ್ತಾಯಿಸಿ ಸ್ಥಳೀಯ ಟಿಪ್ಪು ಸುಲ್ತಾನ್ ಉದ್ಯಾನವನದಲ್ಲಿ ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆಯಿಂದ ಬುಧವಾರ ಪ್ರತಿಭಟನೆ ನಡೆಸಲಾಯಿತು.
ನಂತರ ಜಿಲ್ಲಾಧಿಕಾರಿ ಕಚೇರಿ ಕೇಂದ್ರ ಸ್ಥಾನಿಕ ಅಧಿಕಾರಿ ಪ್ರಶಾಂತಕುಮಾರಗೆ ಮನವಿ ಸಲ್ಲಿಸಿ, ಜಿಲ್ಲೆಯಲ್ಲಿ ಅಧಿಕಾರಿಗಳು ಕನಿಷ್ಠ ಮೂರು ವರ್ಷವಾದರೂ ಕಾರ್ಯನಿರ್ವಹಿಸಬೇಕು. ಆದರೆ ಜನಪ್ರತಿನಿಗಳ ಒತ್ತಡ ಮತ್ತು ವೈಯಕ್ತಿಕ ಲಾಭಕ್ಕಾಗಿ ಬೇಕಾಗಿಬಿಟ್ಟಿಯಾಗಿ ವರ್ಗಾವಣೆ ಮಾಡಲಾಗುತ್ತಿದೆ ಎಂದು ದೂರಿದರು.
ಜಿಲ್ಲೆಯ ಎರಡು ನದಿ, ಚಿನ್ನ ಮತ್ತು ವಿದ್ಯುತ್ ಉತ್ಪಾದನೆ ಕೇಂದ್ರಗಳನ್ನು ಹೊಂದಿದ್ದರೂ ಹಿಂದುಳಿದ ಜಿಲ್ಲೆ ಎನ್ನುವ ಹಣೆಪಟ್ಟಿ ಹೊತ್ತುಕೊಂಡಿದೆ. ಅದಕ್ಕೆ ರಾಜಕೀಯ ಇಚ್ಛಾಶಕ್ತಿ ಕೊರತೆ ಮತ್ತು ಅಧಿಕಾರಿಗಳ ವರ್ಗಾವಣೆ ಪ್ರಮುಖ ಕಾರಣವಾಗಿವೆ.
ಪ್ರಮುಖವಾಗಿ ಕೆಎಎಸ್, ಐಎಎಸ್, ಐಪಿಎಸ್ ಅಧಿಕಾರಿಗಳನ್ನು ಜಿಲ್ಲೆಯನ್ನು ಅರ್ಥ ಮಾಡಿಕೊಳ್ಳುವಷ್ಟರಲ್ಲಿ ವರ್ಗಾವಣೆ ಆಗುತ್ತಿದ್ದು, ಜಿಲ್ಲೆಯ ಅಭಿವೃದ್ಧಿಗೆ ಹಿನ್ನಡೆಯಾಗುತ್ತಿದೆ. ಅದೇ ರೀತಿ ಸರ್ಕಾರಿ ಶಾಲೆಗಳ ಶಿಕ್ಷಕರನ್ನು ವರ್ಗಾವಣೆ ಮಾಡಿದ ಕಾರಣ ನಮ್ಮ ಮಕ್ಕಳ ಭವಿಷ್ಯ ಹಾಳಾಗುತ್ತಿದೆ.
ಸಾವಿರಾರು ಶಿಕ್ಷಕರು ಜಿಲ್ಲೆಯಿಂದ ಇತರೆ ಜಿಲ್ಲೆಗೆ ವರ್ಗಾವಣೆಗೊಂಡು ಹೋಗುತ್ತಿದ್ದಾರೆ. ಕೂಡಲೇ ರಾಜಕೀಯ ಪ್ರೇರಿತವಾಗಿ ನಡೆಯುತ್ತಿರುವ ವರ್ಗಾವಣೆಯನ್ನು ತಡಯಬೇಕು. ಜತೆಗೆ ಮಕ್ಕಳ ಭವಿಷ್ಯವನ್ನು ಅರಿತುಕೊಂಡು ಶಿಕ್ಷಕರ ವರ್ಗಾವಣೆ ಮಾಡಬೇಕು ಎಂದು ಮನವಿ ಪತ್ರದಲ್ಲಿ ಒತ್ತಾಯಿಸಲಾಗಿದೆ.
ಪ್ರತಿಭಟನೆಯಲ್ಲಿ ಸಂಘಟನೆ ಪದಾಧಿಕಾರಿಗಳಾದ ಗುರುರಾಜ, ಬಸವರಾಜ, ವಿದ್ಯಾ ಪಾಟೀಲ್, ಮೋಕ್ಷಮ್ಮ, ಶಾಂಭವಿ, ಈರಮ್ಮ, ಅಂಜಿನೇಯ, ಮಾರೆಮ್ಮ, ರಾಘವೇಂದ್ರ, ಮಲ್ಲಮ್ಮ, ರಂಗಮ್ಮ ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net