ರಸ್ತೆಗೆ ಕಾಂಕ್ರೀಟ್ ಹಾಕಿ ತೇಪೆ

16spt1
Published on

ಸೋಮವಾರಪೇಟೆ: ಸಾರ್ವಜನಿಕರ ಒತ್ತಾಯದ ಮೇರೆಗೆ ಪಟ್ಟಣದ ವಲ್ಲಭಬಾಯಿ ರಸ್ತೆಯಲ್ಲಿನ ಗುಂಡಿಗಳಿಗೆ ಮಂಗಳವಾರ ಕಾಂಕ್ರೀಟ್ ಹಾಕಿ ಮುಚ್ಚಿ ವಾಹನಗಳ ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಯಿತು.

ಅತಿ ಹೆಚ್ಚು ವಾಹನಗಳು ಸಂಚರಿಸುವ ರಸ್ತೆಯಲ್ಲಿ ಗುಂಡಿಬಿದ್ದ ಕಾರಣ, ಸಂಚಾರ ಕಷ್ಟಕರ ಎಂದು ಸ್ಥಳೀಯ ನಿವಾಸಿಗಳು ಒತ್ತಾಯಿಸಿ ಪಟ್ಟಣ ಪಂಚಾಯಿತಿ ವಿರುದ್ಧ ಪ್ರತಿಭಟನೆ ಮಾಡುವುದಾಗಿ ಎಚ್ಚರಿಕೆ ನೀಡಿದರು.

ಮಳೆಗಾಲ ಪ್ರಾರಂಭವಾಗಿದ್ದು, ಡಾಂಬರೀಕರಣ ಮಾಡಲು ಸಾಧ್ಯವಿಲ್ಲ. ಸದ್ಯಕ್ಕೆ ಕಾಂಕ್ರೀಟ್ ಹಾಕಿ ಗುಂಡಿ ಮುಚ್ಚಲಾಗುವುದು. ಬೇಸಿಗೆಯಲ್ಲಿ ರಸ್ತೆ ಡಾಂಬರೀಕರಣ ಮಾಡಲಾಗುವುದು ಎಂದು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ನಾಚಪ್ಪ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net