ರಾಯಣ್ಣ ಪುತ್ಥಳಿ ಪ್ರತಿಷ್ಠಾಪನೆ ಅನುಮತಿಗೆ ಒತ್ತಾಯ

01
Published on

ಬೆಳಗಾವಿ: ಶಾಹು ನಗರದಲ್ಲಿ ಸಂಗೊಳ್ಳಿ ರಾಯಣ್ಣ ಪುತ್ಥಳಿ ಸ್ಥಾಪಿಸಲು ಅನುಮತಿ ನೀಡುವಂತೆ ಒತ್ತಾಯಿಸಿ ಸ್ಥಳೀಯರು ಹಾಗೂ ರಾಯಣ್ಣನ ಅಭಿಮಾನಿಗಳು ಸೋಮವಾರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಪುತ್ಥಳಿ ಪ್ರತಿಷ್ಠಾಪಿಸಲು ಅನುಮತಿ ನೀಡುವಂತೆ ಮೂರು ತಿಂಗಳ ಹಿಂದೆ ಪಾಲಿಕೆಗೆ ಮನವಿ ಸಲ್ಲಿಸಿದ್ದೇವೆ.

ಇದುವರೆಗೂ ಪಾಲಿಕೆಯಿಂದ ಉತ್ತರ ಬಂದಿಲ್ಲ. ತಕ್ಷಣ ರಾಯಣ್ಣ ಪುತ್ಥಳಿ ಸ್ಥಾಪಿಸಲು ಅನುಮತಿ ನೀಡುವಂತೆ ಆಗ್ರಹಿಸಿದರು. 10 ದಿನದೊಳಗೆ ನಮ್ಮ ಬೇಡಿಕೆ ಈಡೇರಿಸಬೇಕು. ಇಲ್ಲದಿದ್ದರೆ ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಸಂಪತ್‌ಕುಮಾರ್ ದೇಸಾಯಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net