ಮಕ್ಕಳ ಕಲಿಕೆಗೆ ಹೆಚ್ಚು ಒತ್ತು ನೀಡಿ

15kdr2
Published on

ಕಡೂರು: ಮಕ್ಕಳು ಕಲಿಕೆಗೆ ಹೆಚ್ಚು ಆಸಕ್ತಿ ವಹಿಸಿದರೆ ಭವಿಷ್ಯದ ದಿನಗಳನ್ನು ಉತ್ತಮವಾಗಿ ರೂಪಿಸಿಕೊಳ್ಳಲು ಸಹಕಾರಿಯಾಗಲಿದೆ ಎಂದು ಜ್ಞಾನವಿಕಾಸ ಕೇಂದ್ರದ ಸಮನ್ವಯಾಧಿಕಾರಿ ಬಿ.ಎಸ್.ಭಾಗ್ಯಾ ಹೇಳಿದರು.

ತಾಲೂಕಿನ ಬಾಣೂರು ಗ್ರಾಮದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ಜ್ಞಾನ ವಿಕಾಸ ಕೇಂದ್ರದಡಿ ನಡೆದ ಮೂರು ತಿಂಗಳ ಕಲಿಕಾ ತರಬೇತಿ ಕಾರ್ಯಾಗಾರದ ಸಮಾರೋಪ ಕಾರ್ಯಕ್ರಮದಲ್ಲಿ ಮಾತನಾಡಿ, ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳು ಮಕ್ಕಳಿಗೆ ಹೆಚ್ಚು ಪೂರಕವಾಗಬೇಕಿದೆ. ಈ ನಿಟ್ಟಿನಲ್ಲಿ ಸೂಕ್ತ ಸಮಯದಲ್ಲಿ ಓದಿಗೂ ಹೆಚ್ಚು ಪ್ರಾಮುಖ್ಯತೆ ನೀಡಿದರೆ ಉನ್ನತ ವಿದ್ಯಾಭ್ಯಾಸದ ಕಡೆ ಹೆಚ್ಚು ಆಸಕ್ತಿ ವಹಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದರು.

ಮಕ್ಕಳು ತಮ್ಮ ಶಾಲಾ ದಿನಗಳಲ್ಲಿ ಶಾಲಾ ಪರಿಸರ ಮತ್ತು ಶಿಕ್ಷಕ ವರ್ಗದ ಪ್ರೋತ್ಸಾಹದಿಂಧ ಆರೋಗ್ಯಕರ ಶಿಕ್ಷಣ ಪಡೆಯಲು ಸಾಧ್ಯವಾಗುತ್ತದೆ. ಜ್ಞಾನ ವಿಕಾಸ ಕೇಂದ್ರದ ಅಡಿಯಲ್ಲಿಯೂ ಸಾಮಾಜಿಕ ಮತ್ತು ಶೈಕ್ಷಣಿಕ ಕಾಳಜಿಯ ಹಿತದೃಷ್ಟಿಯಿಂದ ಓದಿನಲ್ಲಿ ಹಿಂದುಳಿದ ಮಕ್ಕಳನ್ನು ಕಲಿಕೆಗೆ ಒತ್ತುಕೊಡಲು ಟ್ಯೂಷನ್‌ಗಳನ್ನು ಆಯೋಜಿಸಲಾಗುತ್ತಿದೆ ಎಂದರು.

ಮಕ್ಕಳಿಗೆ ಶೈಕ್ಷಣಿಕ ಲೇಖನ ಸಾಮಾಗ್ರಿಗಳನ್ನು ವಿತರಿಸಲಾಯಿತು. ಮುಖ್ಯಶಿಕ್ಷಕ ವಸಂತ್, ಒಕ್ಕೂಟದ ಪದಾಧಿಕಾರಿ ರೇಖಾ, ಸೇವಾಪ್ರತಿನಿಧಿ ಪಾರ್ವತಿ ಮತ್ತಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net