ಸ್ವಾರ್ಥ ಬದಿಗಿಟ್ಟು ದೇಶದ ಪ್ರಗತಿಗೆ ಪ್ರತಿಭೆ ತೊಡಗಿಸಿ

9KMD-1
ಕೆ.ಎಂ.ದೊಡ್ಡಿ ಭಾರತೀ ಕಾಲೇಜು ಕುವೆಂಪು ಸಭಾಗಂಣದಲ್ಲಿ ಭಾರತೀ ಪಿಯು ಅಕಾಡೆಮಿ ಆಫ್ ಎಕ್ಸ್‌ಲೆನ್ಸ್ ಮತ್ತು ಭಾರತೀ ಸ್ಕೂಲ್‌ಆಫ್ ಎಕ್ಸ್‌ಲೆನ್ಸ್ ವತಿಯಿಂದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.
Published on

ಕೆ.ಎಂ.ದೊಡ್ಡಿ : ಸ್ವಾರ್ಥ ಸಾಧನೆ ಬದಿಗಿಟ್ಟು ತಮ್ಮಲ್ಲಿರುವ ಪ್ರತಿಭೆಗಳನ್ನು ದೇಶದ ಪ್ರಗತಿಗೆ ತೊಡಗಿಸಿ ಎಂದು ಸಾಹಿತಿ ಡಾ.ಮ.ರಾಮಕೃಷ್ಣ ತಿಳಿಸಿದರು.

ಇಲ್ಲಿನ ಭಾರತೀ ಕಾಲೇಜು ಕುವೆಂಪು ಸಭಾಗಂಣದಲ್ಲಿ ಭಾರತೀ ಪಿಯು ಅಕಾಡೆಮಿ ಆಫ್ ಎಕ್ಸ್‌ಲೆನ್ಸ್ ಮತ್ತು ಭಾರತೀ ಸ್ಕೂಲ್‌ಆಫ್ ಎಕ್ಸ್‌ಲೆನ್ಸ್ ವತಿಯಿಂದ ಶುಕ್ರವಾರ ಆಯೋಜಿಸಿದ್ದ ಸ್ವಾಗತ ಸಮಾರಂಭ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ತಮ್ಮಲ್ಲಿ ಇರುವ ಪ್ರತಿಭೆಗಳನ್ನು ಪ್ರಪಂಚಕ್ಕೆ ತೋರಿಸಬೇಕು. ಅವುಗಳನ್ನು ಎಂದಿಗೂ ಮರೆಮಾಚಬೇಡಿ ಎಂದು ಕಿವಿ ಮಾತು ಹೇಳಿದರು.

ವಿದ್ಯಾಥಿಗಳು ಕೇವಲ ತರಗತಿ ಪರೀಕ್ಷೆಗಳಿಗೆ ಅವಲಂಭಿತವಾಗದೆ ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಪಿಯುಸಿ ಹಂತದಲ್ಲೇ ಮಾಹಿತಿ ಕಲೆ ಹಾಕಿ ದಿನ ಪತ್ರಿಕೆಗಳನ್ನು ಓದುವ ಮೂಲಕ ಸಾಮಾನ್ಯ ಜ್ಞಾನ ಹೆಚ್ಚಿಸಿಕೊಳ್ಳಬೇಕು. ಹಳ್ಳಿಗಾಡಿನ ವಿದ್ಯಾರ್ಥಿಗಳಿಗೆ ಮಾಜಿ ಸಂಸದ ದಿವಂಗತ ಜಿ.ಮಾದೇಗೌಡ ಅವರು ಸ್ಥಾಪಿಸಿದ ಭಾರತೀ ವಿದ್ಯಾಸಂಸ್ಥೆಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ವ್ಯಾಸಂಗ ಮಾಡಿ ದೇಶ-ವಿದೇಶಗಳಲ್ಲಿ ಉದ್ಯೋಗದಲ್ಲಿರುವುದು ಸಂಸ್ಥೆಯ ಹಿರಿಮೆಗೆ ಸಾಕ್ಷಿಯಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಇಂಡಿಯನ್ ಫಾರೆಸ್ಟ್ ಸರ್ವಿಸ್‌ನ 20ನೇ ರ‌್ಯಾಂಕ್ ಪಡೆದ ವಿದ್ಯಾರ್ಥಿ ಆರ್.ರಾಹುಲ್‌ಗೌಡ ಮಾತನಾಡಿ, ವಿದ್ಯಾರ್ಥಿಗಳು ಓದಿನ ಜತೆಗೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ಬೇಕಾದ ಸಾಮಾನ್ಯ ಜ್ಞಾನ ಹೆಚ್ಚಿಸಿಕೊಳ್ಳಬೇಕು. ಪತ್ರಿಕೆ ಮತ್ತು ಪುಸ್ತಕ ಹವ್ಯಾಸ ರೂಡಿಸಿಕೊಡು ಬಿಡುವಿನ ವೇಳೆಯಲ್ಲಿ ಗಂಥಾಲಯ ಉಪಯೋಗಿಸಿ ಕೊಳ್ಳಿ ಎಂದು ಕಿವಿಮಾತು ಹೇಳಿದರು.

ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಸಿ.ವಿ.ಮಲ್ಲಿಕಾರ್ಜುನ ವಹಿಸಿದ್ದರು. ಈ ವೇಳೆ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಕಾಲೇಜಿನ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು. ವಿವಿಧ ಅಂಗಸಂಸ್ಥೆಯ ಮುಖ್ಯಸ್ಥರಾದ ಎಂ.ಎಸ್.ಪುಟ್ಟಸ್ವಾಮಿ, ವಿನೋದಾ, ಅನಿತಾ, ಕುಮಾರಸ್ವಾಮಿ, ಅನುರಾಧಾ, ದಿವ್ಯಾ, ಕುಸುಮಾ ಸೇರಿದಂತೆ ಮತ್ತಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net