

ಉಡುಪಿ: ಕರೊನಾ ಪಾಸಿಟಿವ್ ಹಿನ್ನೆಲೆಯಲ್ಲಿ ಜುಲೈ 20ರಂದು ಮಣಿಪಾಲ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಪುತ್ತಿಗೆ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ರೋಗದಿಂದ ಸಂಪೂರ್ಣ ಗುಣಮುಖರಾಗಿದ್ದು ಆಸ್ಪತ್ರೆಯಿಂದ ಬಿಡುಗಡೆಗೊಂಡು ಉಡುಪಿ ಪಾಡಿಗಾರು ಮಠಕ್ಕೆ ಶನಿವಾರ ಮಧ್ಯಾಹ್ನ ಆಗಮಿಸಿದ್ದಾರೆ. ಸದ್ಯ ಶ್ರೀಗಳ ಆರೋಗ್ಯ ಸ್ಥಿರವಾಗಿದ್ದು, ತುಸುಕಾಲ ವಿಶ್ರಾಂತಿಯಲ್ಲಿ ಇರಲಿದ್ದಾರೆ ಎಂದು ಮಠದ ಪ್ರಕಟಣೆ ತಿಳಿಸಿದೆ.