ಬಾಂಗ್ಲಾ ಹಿಂದು ದೌರ್ಜನ್ಯಕ್ಕೆ ಪುತ್ತಿಗೆ ಶ್ರೀ ಖಂಡನೆ

AKB_8902
Published on

ಉಡುಪಿ: ಬಾಂಗ್ಲಾ ದೇಶದಲ್ಲಿ ನಡೆಯುತ್ತಿರುವ ವಿದ್ಯಮಾನಗಳು ಅತ್ಯಂತ ಕಳವಳಕಾರಿಯಾಗಿದ್ದು, ಹಿಂದೂಗಳ ಮೇಲೆ ನಿರಂತರ ದೌರ್ಜನ್ಯ ನಡೆಯುತ್ತಿದೆ. ಇತ್ತೀಚಿನ ದಿನಗಳಲ್ಲಿ ವಿಶ್ವಾದ್ಯಂತ ಹಿಂದುಗಳಿಗೆ ತೊಂದರೆ ನೀಡಲಾಗುತ್ತಿದ್ದು, ಇದು ಅಂತಾರಾಷ್ಟ್ರೀಯ ಮಟ್ಟದ ಪಿತೂರಿಯ ಭಾಗವಾಗಿದೆ ಎಂದು ಪರ್ಯಾಯ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಅತಂಕವ್ಯಕ್ತಪಡಿಸಿದ್ದಾರೆ.
ಈ ಹಿಂದೆ ಕಾಶ್ಮೀರದಲ್ಲಿ ಏನು ನಡೆದಿತ್ತೋ ಅದೇ ಟನೆ ಬಾಂಗ್ಲಾದೇಶದಲ್ಲಿ ಮತ್ತೆ ಮರುಕಳಿಸಿದೆ. ಇಂಥ ಸಮಸ್ಯೆಗಳ ಮೂಲೋತ್ಪಾಟನೆಗೆ ಕೇಂದ್ರ ಸರ್ಕಾರ ಪರಿಣಾಮಕಾರಿ ಯೋಜನೆಗಳನ್ನು ರೂಪಿಸಬೇಕು. ದಿಟ್ಟಹೆಜ್ಜೆಯನ್ನಿಡುವ ಮೂಲಕ ಶಾಶ್ವತ ಪರಿಹಾರ ಒದಗಿಸಬೇಕು. ಹಿಂದೂಗಳು ಜಾಗೃತರಾಗಿ ಹಿಂದೂ ಸಂಸತಿ ಉಳಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net