

ಪುತ್ತೂರು: ಮಹಿಳಾ ಪೊಲೀಸ್ ಠಾಣೆಯ ಹಿಂಭಾಗದಲ್ಲಿ ವಿಟ್ಲ ಮೂಲದ ಯುವತಿಯ ಮೇಲೆ ಚೂರಿಯಿಂದ ದಾಳಿ ನಡೆದಿದ್ದು, ಗಂಭೀರ ಗಾಯಗೊಂಡ ಯುವತಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.
ವಿಟ್ಲ ಮೂಲದ ಗೌರಿ (25) ಗಾಯಾಳು. ಸರ್ಕಾರಿ ಬಸ್ ನಿಲ್ದಾಣದ ಬಳಿಯ ಅಂಗಡಿಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದ ಯುವತಿಗೆ ಸರಪಾಡಿ ಮೂಲದ ಯುವಕನಿಂದ ಚಾಕುವಿನಿಂದ ಮೂರಿಂದ ನಾಲ್ಕು ಬಾರಿ ಕುತ್ತಿಗೆಗೆ ದಾಳಿ ನಡೆಸಿದ್ದಾರೆನ್ನಲಾಗಿದೆ. ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಪುಷ್ಕರಣಿ ಹಾಗೂ ಮಹಿಳಾ ಪೊಲೀಸ್ ಠಾಣೆಯ ನಡುವಿನ ಜಾಗದಲ್ಲಿ ಈ ದಾಳಿ ನಡೆದಿದೆ.
ಗಂಭೀರ ಗಾಯಗೊಂಡ ಯುವತಿಯನ್ನು ಪುತ್ತೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ವರ್ಗಾಯಿಸಲಾಗಿದೆ.