ಪಕ್ಷದ ಚೌಕಟ್ಟಿನಲ್ಲಿದ್ದವರಿಗಷ್ಟೇ ಅವಕಾಶ PUTTUR

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಪುತ್ತೂರು ಬಿಜೆಪಿ ಕಚೇರಿಗೆ ಭೇಟಿ ನೀಡಿ ಸಮಾಲೋಚನೆ ನಡೆಸಿದರು.
ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಪುತ್ತೂರು ಬಿಜೆಪಿ ಕಚೇರಿಗೆ ಭೇಟಿ ನೀಡಿ ಸಮಾಲೋಚನೆ ನಡೆಸಿದರು.
Published on

ಪ್ರಮುಖ ಮುಖ್ಯಾಂಶಗಳು

  • ಪುತ್ತೂರಿನಲ್ಲಿ ಬಿ.ಎಲ್.ಸಂತೋಷ್ ಹೇಳಿಕೆ
ಪುತ್ತೂರು: ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಗುರುವಾರ ಪುತ್ತೂರು ಬಿಜೆಪಿ ಕಚೇರಿಗೆ ಭೇಟಿ ನೀಡಿ ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಿದರು.
ಪಕ್ಷದ ಚೌಕಟ್ಟಿನಲ್ಲಿದ್ದವರಿಗಷ್ಟೇ ಅವಕಾಶ ಸಿಗಲಿದ್ದು, ಹೊರಗಿದ್ದವರಿಗೆ ಪಕ್ಷದ ಬಾಗಿಲು ಬಂದ್ ಮಾಡಲಾಗುವುದು. ಸಭೆಯಲ್ಲಿರುವ ಶೇ.೨೫ಮಂದಿ ಇಲ್ಲಿಂದ ಹೋಗುವುದನ್ನೇ ಕಾಯುತ್ತಿದ್ದು, ಸಭೆಯ ಮಾಹಿತಿಯನ್ನು ಇನ್ನೊಂದು ತಂಡಕ್ಕೆ ರವಾನಿಸುತ್ತದೆ ಎಂಬುದೂ ನನಗೆ ಗೊತ್ತಿದೆ. ಇದರಿಂದ ಪಕ್ಷಕ್ಕೆ ಮತ್ತು ನಿಮಗೇ ನಷ್ಟ ಎಂದರು.
ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ವಿಧಾನಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೊಟ್ಯಾಡಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರೇಮಾನಂದ ಶೆಟ್ಟಿ, ಜಿಲ್ಲಾ ಉಪಾಧ್ಯಕ್ಷರಾದ ಸುನೀಲ್ ಆಳ್ವ, ಪ್ರಸನ್ನ ಮಾರ್ತಾ, ಮಾಜಿ ಶಾಸಕ ಸಂಜೀವ ಮಠಂದೂರು, ದಯಾನಂದ ಶೆಟ್ಟಿ, ಶಿವಕುಮಾರ್ ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net