ಪುತ್ತೂರು: ತಾಲೂಕು ಕಾನೂನು ಸೇವೆಗಳ ಸಮಿತಿ ಅಧ್ಯಕ್ಷ ಸದಾನಂದ ನಾಗಪ್ಪ ನಾಯ್ಕ ಪುತ್ತೂರು ತಾಲೂಕು ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ವ್ಯವಸ್ಥೆಗಳ ಪರಿಶೀಲನೆ ನಡೆಸಿದರು.
ಹೊರ ರೋಗಿಗಳ ವಿಭಾಗ, ಒಳರೋಗಿಗಳ ವಿಭಾಗ, ಪುರುಷರು, ಮಹಿಳೆಯರ ವಿಭಾಗ ಹಾಗೂ ಮಕ್ಕಳ ವಿಭಾಗದ ಪರಿಶೀಲಿಸಿದರು. 10 ವರ್ಷಗಳಿಂದ ಕಾರ್ಯಾಚರಿಸುತ್ತಿರುವ ಡಯಾಲಿಸಿಸ್ ವಿಭಾಗಕ್ಕೆ ಭೇಟಿ ನೀಡಿ ಮಾಹಿತಿ ಪಡೆದರು.
ಡಯಾಲಿಸಿಸ್ ಹಾಗೂ ವೆಂಟಿಲೇಟರ್ ಯಂತ್ರದ ಕೊರತೆ ಕಂಡು ಬಂದಿದ್ದು, ಈ ಬಗ್ಗೆ ಆರ್.ಎಚ್.ಒ ಅವರನ್ನು ಕರೆಸಿ ಮಾತುಕತೆ ನಡೆಸಿದರು. ನಗರ ಠಾಣೆ ಪೊಲೀಸ್ ಸಿಬ್ಬಂದಿ ಪ್ರಭಾಕರ ಮೋರೆ, ಪುತ್ತೂರು ಸರ್ಕಾರಿ ಆಸ್ಪತ್ರೆಯ ಡಾ.ಅಜಯ್, ಸಮಿತಿಯ ಸಿಬ್ಬಂದಿ ಹಾಜರಿದ್ದರು.