ಸಂಪ್ಯ ಉದಯಗಿರಿ ಕ್ಷೇತ್ರದಲ್ಲಿ ಪುತ್ತೂರು ದಸರಾಕ್ಕೆ ಚಾಲನೆ

dasara (1)
Published on

ಪುತ್ತೂರು ಗ್ರಾಮಾಂತರ: ಆರ್ಯಾಪು ಗ್ರಾಮದ ಸಂಪ್ಯ ಉದಯಗಿರಿಯ ಶ್ರೀ ವಿಷ್ಣುಮೂರ್ತಿ-ಅನ್ನಪೂಣೇಶ್ವರಿ ಕ್ಷೇತ್ರದಲ್ಲಿ ಪುತ್ತೂರು ದಸರಾ ನವದುರ್ಗಾರಾಧನಾ ಸಮಿತಿ ನೇತೃತ್ವದಲ್ಲಿ ಅ.3ರಿಂದ 14ರ ತನಕ ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿರುವ 22ನೇ ವರ್ಷದ ಶ್ರೀ ಗಣಪತಿ, ಶಾರದೆ, ನವದುರ್ಗೆಯರ ಸಹಿತ ಪುತ್ತೂರು ದಸರಾ ಮಹೋತ್ಸವ ಗುರುವಾರ ಬೆಳಗ್ಗೆ ಗಣಪತಿ ಮತ್ತು ನವದುರ್ಗೆಯರ ವಿಗ್ರಹ ಪ್ರತಿಷ್ಠಾಪನೆಯೊಂದಿಗೆ ಆರಂಭಗೊಂಡಿತು.

ಪುತ್ತೂರು ದಸರಾ ಮಹೋತ್ಸವ ಸಮಿತಿ ಸಂಚಾಲಕ ಕುಕ್ಕಾಡಿ ತಂತ್ರಿ ಪ್ರೀತಂ ಪುತ್ತೂರಾಯ ಅವರ ನೇತೃತ್ವದಲ್ಲಿ ವಿಗ್ರಹ ಪ್ರತಿಷ್ಠಾಪನೆ- ವೈದಿಕ ಕಾರ್ಯಕ್ರಮ ನಡೆಯಿತು. ಪುತ್ತೂರು ನಗರಸಭೆ ಉಪಾಧ್ಯಕ್ಷ ಬಾಲಚಂದ್ರ ಕರಿಯಾಳ ಪುತ್ತೂರು ದಸರಾ ಮಹೋತ್ಸವ ಉದ್ಘಾಟಿಸಿದರು.

ಉದ್ಯಮಿ ರಮೇಶ್ ಪ್ರಭು ಧ್ವಜಾರೋಹಣಗೈದು ಮಾತನಾಡಿದರು. ಆರ್ಯಾಪು ಗ್ರಾ.ಪಂ ಉಪಾಧ್ಯಕ್ಷ ಅಶೋಕ್ ನಾಯ್ಕ, ಪುತ್ತೂರು ದಸರಾ ಮಹೋತ್ಸವ ಸಮಿತಿ ಅಧ್ಯಕ್ಷ ಯು.ಲೋಕೇಶ್ ಹೆಗ್ಡೆ ಉರ್ಲಾಂಡಿ, ಕಾರ್ಯಾಧ್ಯಕ್ಷ ಬಾಲಕೃಷ್ಣ ಶೆಟ್ಟಿ ಕುಕ್ಕಾಡಿ, ಪ್ರಧಾನ ಕಾರ್ಯದರ್ಶಿ ನೇಮಾಕ್ಷ ಸುವರ್ಣ, ಉಪಾಧ್ಯಕ್ಷ ಜಯಂತ ಶೆಟ್ಟಿ ಕಂಬಳತ್ತಡ್ಕ, ಗೌರವ ಸಲಹೆಗಾರರಾದ ರಾಜೇಶ್ ಬನ್ನೂರು, ಮಂಜಪ್ಪ ರೈ ಬಾರಿಕೆ ಮತ್ತಿತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net