

ಮಂಗಳೂರು: ಪುತ್ತೂರು ಉಪ ವಿಭಾಗದ ಡಿವೈಎಸ್ಪಿಯಾಗಿದ್ದ ಡಾ.ಗಾನಾ ಪಿ.ಕುಮಾರ್ ಅವರನ್ನು ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಅವರ ಸ್ಥಾನಕ್ಕೆ ಪ್ರಸ್ತುತ ಬೆಂಗಳೂರಿನಲ್ಲಿ ಸಿಐಡಿಯಲ್ಲಿ ಡಿವೈಎಸ್ಪಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ವೀರಯ್ಯ ಹಿರೇಮಠ ಅವರನ್ನು ನೇಮಕ ಮಾಡಲಾಗಿದೆ.
2020ರ ಸೆಪ್ಟೆಂಬರ್ ತಿಂಗಳಿನಲ್ಲಿ ಡಾ.ಗಾನಾ ಪಿ.ಕುಮಾರ್ ಅವರು ಪುತ್ತೂರು ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಾಗಿ ಕರ್ತವ್ಯಕ್ಕೆ ಹಾಜರಾಗಿದ್ದರು. ಸುಮಾರು ಎರಡು ವರ್ಷಗಳ ಕಾಲ ಇಲ್ಲಿ ಸೇವೆ ಸಲ್ಲಿಸಿದ ಅವರನ್ನು ಸಿಐಡಿ ವಿಭಾಗಕ್ಕೆ ವರ್ಗಾವಣೆಗೊಳಿಸಲಾಗಿದೆ.
ಪುತ್ತೂರು ಉಪ ವಿಭಾಗದ ನೂತನ ಡಿವೈಎಸ್ಪಿಯಾಗಿ ನೇಮಕವಾಗಿರುವ ವೀರಯ್ಯ ಹಿರೇಮಠ ಅವರು ಪ್ರಾಯೋಗಿಕ ತರಬೇತಿ ಪೂರ್ಣಗೊಳಿಸಿ ತಿಂಗಳ ಹಿಂದೆಯಷ್ಟೆ ಸಿಐಡಿಗೆ ತಾತ್ಕಾಲಿಕವಾಗಿ ನಿಯುಕ್ತಿಗೊಂಡಿದ್ದರು.