ಗ್ರಾಮಗಳಲ್ಲಿ ಕೋಟಿವೃಕ್ಷ ಅಭಿಯಾನ - ನವೀನ್ ಭಂಡಾರಿ

PTR_15 AUG_2
Published on

ಪುತ್ತೂರು: ಪರಿಸರದ ಬಗ್ಗೆ ಕಾಳಜಿ ವಹಿಸಲು ಗ್ರಾಮ ಗ್ರಾಮಗಳಲ್ಲಿ ಕೋಟಿವೃಕ್ಷ ಅಭಿಯಾನದ ಮೂಲಕ ಗಿಡಗಳನ್ನು ನೆಡುವ ಕಾರ್ಯಗಳನ್ನು ಮಾಡಲಾಗುತ್ತಿದೆ. ನೆಲ, ಜಲ, ಪರಿಸರ ಜತೆಗೆ ಸ್ವಾತಂತ್ರ್ಯೋತ್ಸವದ ಸಂಭ್ರಮವನ್ನು ವರ್ಷವಿಡೀ ಆಚರಿಸುವ ಮೂಲಕ ಸಮೃದ್ಧ ಭಾರತವನ್ನು ರೂಪಿಸಬೇಕಾಗಿದೆ ಎಂದು ಪುತ್ತೂರು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ನವೀನ್ ಭಂಡಾರಿ ಹೇಳಿದರು.

ಅವರು ಮಂಗಳವಾರ 77 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಪುತ್ತೂರು ತಾಲೂಕು ಪಂಚಾಯಿತಿ ಆವರಣದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

ತಾಲೂಕು ಪಂಚಾಯತಿ ಸಹಾಯಕ ನಿರ್ದೇಶಕಿ (ಗ್ರಾ.ಉ.) ಶೈಲಜಾ ಭಟ್, ನಿವೃತ್ತ ಸೇನಾನಿ ಹಾಗೂ ತಾ.ಪಂ. ಸಿಬ್ಬಂದಿ ರವಿಚಂದ್ರ, ತಾ.ಪಂ. ವ್ಯವಸ್ಥಾಪಕ ಜಯಪ್ರಕಾಶ್, ಸಿಬ್ಬಂದಿಗಳು ಉಪಸ್ಥಿತರಿದ್ದರು. ಕೊಂಬೆಟ್ಟು ಸರಕಾರಿ ಪ್ರೌಢಶಾಲಾ ವಿಭಾಗದ ಎನ್‌ಸಿಸಿ ಹಾಗೂ ಎಸ್ ಪಿಸಿ ತಂಡದ ವಿದ್ಯಾರ್ಥಿಗಳು ಧ್ವಜ ಗೀತೆ, ವಂದೇ ಮಾತರಂ ಹಾಗೂ ರಾಷ್ಟ್ರ ಗೀತೆಯನ್ನು ಹಾಡಿದರು. ಯುವ ಸಬಲೀಕರಣ ಕ್ರೀಡಾ ಮೇಲ್ವಿಚಾರಕ ಶ್ರೀಕಾಂತ್ ಪೂಜಾರಿ ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net