ಕೆಯ್ಯೂರಿನ ಯುವತಿ ಬೆಂಗಳೂರಿನಲ್ಲಿ ಆತ್ಮಹತ್ಯೆ

sucide
Published on


ಪುತ್ತೂರು ಗ್ರಾಮಾಂತರ: ಪುತ್ತೂರು ತಾಲೂಕಿನ ಕೆಯ್ಯೂರು ಗ್ರಾಮದ ಯುವತಿ ಬೆಂಗಳೂರಿನಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.


ಕೆಯ್ಯೂರು ಗ್ರಾಮದ ಮಾಡಾವು ಸಮೀಪದ ಬೊಳಿಕ್ಕಳ ಮಠ ಸ್ಥಾನತ್ತಾರು ನಿವಾಸಿ ಚಂದ್ರಶೇಖರ್ ರೈ -ತಿಂಗಳಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆಶಾ ಕಾರ್ಯಕರ್ತೆ ಸೋಮಾವತಿ ದಂಪತಿಯ ಏಕೈಕ ಪುತ್ರಿ ಶ್ರುತಿ ಸಿ.ರೈ (22) ಆತ್ಮಹತ್ಯೆ ಮಾಡಿಕೊಂಡವರು. ಶ್ರುತಿ ಕಳೆದ ಎರಡು ವರ್ಷಗಳಿಂದ ಬೆಂಗಳೂರಿನಲ್ಲಿ ಬಾಡಿಗೆ ಮನೆಯಲ್ಲಿ ವಾಸ್ತವ್ಯವಿದ್ದುಕೊಂಡು ಅನಿಮೇಷನ್ ಶಿಕ್ಷಣ ಪಡೆಯುತ್ತಿದ್ದರು. ಅನಿಮೇಷನ್ ಕೋರ್ಸ್ ಮುಗಿಸಿದ್ದ ಅವರು ಉದ್ಯೋಗದ ಹುಡುಕಾಟದಲ್ಲಿದ್ದರು.


ಕೆಲವು ದಿನಗಳ ಹಿಂದೆ ಶ್ರುತಿ ತಮ್ಮ ಬಾಡಿಗೆ ಮನೆಯಲ್ಲಿ ಇಲಿಷಾಷಣ (ವಿಷ) ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ವಿಷ ಸೇವಿಸಿ ನರಳಾಡುತ್ತಿದ್ದ ವಿಷಯ ತಿಳಿದ ಸ್ಥಳೀಯರು ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಅವರು ಚಿಕಿತ್ಸೆಗೆ ಸ್ಪಂದಿಸದೆ ಏ.30ರಂದು ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಮೃತದೇಹವನ್ನು ಕೆಯ್ಯೂರಿನ ಮನೆಗೆ ತಂದು ಅಂತ್ಯಸಂಸ್ಕಾರ ಮಾಡಲಾಗಿದೆ. ಉದ್ಯೋಗ ಸಿಕ್ಕಿಲ್ಲ ಎಂಬ ಕೊರಗಿನಿಂದ ಶ್ರುತಿ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಶಂಕಿಸಲಾಗಿದೆ. ವಿದ್ಯಾವಂತ ಯುತಿಯಾಗಿದ್ದ ಶ್ರುತಿ ಅವರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net