

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ವಿವೇಕಾನಂದ ಇನ್ ಸ್ಟಿಟ್ಯೂಟ್ ಆಫ್ ಫಾರ್ಮಾಸ್ಯುಟಿಕಲ್ ಸೈನ್ಸಸ್ ಉದ್ಘಾಟನೆಯನ್ನು ಭಾರತ ಸರ್ಕಾರದ ಆರೋಗ್ಯ ರಾಜ್ಯ ಸಚಿವೆ ಡಾ. ಭಾರತಿ ಪ್ರವೀಣ್ ಪವಾರ್ ನಡೆಸಿ, ಪ್ರಥಮ ವರ್ಷದ ವಿದ್ಯಾರ್ಥಿಗಳನ್ನು ಗುರುತಿಸುವ ಕಾರ್ಯ ಮಾಡಿದರು.
ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕೆ. ಪ್ರಭಾಕರ ಭಟ್, ಬೆಂಗಳೂರು ರಾಜೀವ ಗಾಂಧಿ ಯನಿವರ್ಸಿಟಿ ಆಫ್ ಹೆಲ್ತ್ ಸೈನ್ಸ್ ಸಿಂಡಿಕೇಟ್ ಸದಸ್ಯ ಡಾ. ಎಸ್. ರಾಮಚಂದ್ರ ಸೆಟ್ಟಿ, ವಿವೇಕಾನಂದ ಇನ್ ಸ್ಟಿಟ್ಯೂಟ್ ಆಫ್ ಫಾರ್ಮಾಸ್ಯುಟಿಕಲ್ ಸೈನ್ಸಸ್ ಸಂಚಾಲಕ ಗೋವಿಂದ ಪ್ರಕಾಶ್ ಸಾಯ, ಪ್ರಾಂಶುಪಾಲ ಡಾ. ಗುರುರಾಜ ಎಂ. ಪಿ. ಉಪಸ್ಥಿತರಿದ್ದರು.
ಶ್ರೀಲಕ್ಷ್ಮೀ ಬಳಗ ಪ್ರಾರ್ಥಿಸಿದರು. ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ. ಕೆ. ಎಂ. ಕೃಷ್ಣ ಭಟ್ ಸ್ವಾಗತಿಸಿದರು. ವಿವೇಕಾನಂದ ಇನ್ ಸ್ಟಿಟ್ಯೂಟ್ ಆಫ್ ಫಾರ್ಮಾಸ್ಯುಟಿಕಲ್ ಸೈನ್ಸಸ್ ಅಧ್ಯಕ್ಷ ಎಂ. ಗೋಪಿನಾಥ ಶೆಟ್ಟಿ ವಂದಿಸಿದರು. ಡಾ. ವಿಜಯ ಸರಸ್ವತಿ ಬಿ. ಸ್ಮಿತಾ ಕಾರ್ಯಕ್ರಮ ನಿರೂಪಿಸಿದರು.