ಪುತ್ತೂರಿನ ಸಂತೆ ವ್ಯಾಪಾರಿಗಳಿಂದ ನಿಷೇಧಿತ ಪ್ಲಾಸ್ಟಿಕ್ ವಶಪಡಿಸಿಕೊಂಡ ಅಧಿಕಾರಿಗಳು

ptr_19 jul vasa
Published on


ಪುತ್ತೂರು: ಸಂತೆ ವ್ಯಾಪಾರಿಗಳು ನಿಷೇಧಿತ ಪ್ಲಾಸ್ಟಿಕ್ ಬಳಸುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಪುತ್ತೂರು ನಗರಸಭೆ ಹಿರಿಯ ಆರೋಗ್ಯ ನಿರೀಕ್ಷಕರಾದ ಶ್ವೇತಾ ಕಿರಣ್ ಮತ್ತು ವರಲಕ್ಷ್ಮೀಯವರ ನೇತೃತ್ವದ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ನಿಷೇಧಿತ ಪ್ಲಾಸ್ಟಿಕ್ ವಶಪಡಿಸಿಕೊಂಡಿದ್ದಾರೆ.
ದೇಶಾದ್ಯಂತ ಏಕ ಬಳಕೆಯ ಪ್ಲಾಸ್ಟಿಕ್ ಮೇಲೆ ನಿಷೇಧ ಹೇರಲಾಗಿರುವ ಹಿನ್ನಲೆಯಲ್ಲಿ ಪುತ್ತೂರು ನಗರಸಭೆ ಅಧಿಕಾರಿಗಳು ಪುತ್ತೂರು ಸಂತೆ ಮಾರುಕಟ್ಟೆಯಲ್ಲಿ ಕಾರ್ಯಾಚರಣೆ ನಡೆಸಿ ವ್ಯಾಪಾರಿಗಳಿಂದ ನಿಷೇಧಿತ ಪ್ಲಾಸ್ಟಿಕ್‌ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಏಕ ಬಳಕೆ ಪ್ಲಾಸ್ಟಿಕ್ ನಿಷೇಧದ ಕುರಿತು ನಗರಸಭೆ ಈಗಾಗಲೇ ಪತ್ರಿಕೆ ಮೂಲಕ ಮತ್ತು ವರ್ತಕರಿಗೆ ನೋಟೀಸು ನೀಡುವ ಮೂಲಕ ಪ್ಲಾಸ್ಟಿಕ್ ನಿಷೇಧಿಸುವಂತೆ ಎಚ್ಚರಿಕೆ ನೀಡಿದ್ದು, ಇದೀಗ ಅಂಗಡಿಗಳು ಮತ್ತು ಸಾರ್ವಜನಿಕ ಸ್ಥಳಗಳಲ್ಲೂ ಕಾರ್ಯಾಚರಣೆ ನಡೆಸಲು ಮುಂದಾಗಿದೆ. ಕಿಲ್ಲೆ ಮೈದಾನದಲ್ಲಿ ನಡೆಯುವ ಸಂತೆಯಲ್ಲಿ ಕಾರ್ಯಾಚರಣೆ ನಡೆಸಿದಾಗ ಗೋಣಿಯಲ್ಲಿ ಪ್ಲಾಸ್ಟಿಕ್ ತುಂಬುವಷ್ಟು ಪ್ಲಾಸ್ಟಿಕ್‌ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಪುತ್ತೂರು ನಗರಸಭೆ ಅಧಿಕಾರಿಗಳು ಪುತ್ತೂರು ಸಂತೆ ಮಾರುಕಟ್ಟೆಯಲ್ಲಿ ಕಾರ್ಯಾಚರಣೆ ನಡೆಸಿ ವ್ಯಾಪಾರಿಗಳಿಂದ ನಿಷೇಧಿತ ಪ್ಲಾಸ್ಟಿಕ್‌ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net