ತಂತ್ರಜ್ಞಾನಗಳಿಗೆ ತಕ್ಕಂತೆ ಬದಲಾಗಬೇಕು VC

ವಿವೇಕಾನಂದ ಕಾಲೇಜಿನಲ್ಲಿ ಉಪನ್ಯಾಸಕರ ಪುನಶ್ಚೇತನ ಕಾರ್ಯಾಗಾರವನ್ನು ಮುರಳಿಕೃಷ್ಣ ಕೆ.ಎನ್‌. ಉದ್ಘಾಟಿಸಿದರು. ಪ್ರೊ.ಶ್ರೀಪತಿ ಕಲ್ಲೂರಾಯ, ಶ್ರೀಕೃಷ್ಣ ಗಣರಾಜ ಭಟ್‌ ಇತರರು ಇದ್ದರು.
ವಿವೇಕಾನಂದ ಕಾಲೇಜಿನಲ್ಲಿ ಉಪನ್ಯಾಸಕರ ಪುನಶ್ಚೇತನ ಕಾರ್ಯಾಗಾರವನ್ನು ಮುರಳಿಕೃಷ್ಣ ಕೆ.ಎನ್‌. ಉದ್ಘಾಟಿಸಿದರು. ಪ್ರೊ.ಶ್ರೀಪತಿ ಕಲ್ಲೂರಾಯ, ಶ್ರೀಕೃಷ್ಣ ಗಣರಾಜ ಭಟ್‌ ಇತರರು ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಮುರಳಿಕೃಷ್ಣ ಕೆ.ಎನ್‌. ಆಶಯ
  • ವಿವೇಕಾನಂದದಲ್ಲಿ ಉಪನ್ಯಾಸಕರಿಗೆ ಕಾರ್ಯಾಗಾರ
ಪುತ್ತೂರು: ವೃತ್ತಿಯಲ್ಲಿ ಕಾರ್ಯ ಚಟುವಟಿಕೆಗಳು ಸುಲಲಿತವಾಗಿ, ಶಿಸ್ತು ಬದ್ಧವಾಗಿ ನಡೆಯಬೇಕಾದರೆ ಕಾರ್ಯಸೂಚಿ ಅತ್ಯಗತ್ಯ. ತಂತ್ರಜ್ಞಾನಗಳ ಆವಿಷ್ಕಾರಗಳು ಅತಿ ವೇಗದಲ್ಲಿ ಅಭಿವೃದ್ಧಿಯಾಗುತ್ತಿದ್ದು ನಾವು ಅದಕ್ಕೆ ತಕ್ಕಂತೆ ಬದಲಾಗುವುದು ಅಗತ್ಯ. ಪರಸ್ಪರ ಗೌರವ, ಪ್ರೀತಿ, ವಿಶ್ವಾಸವನ್ನು ರೂಢಿಸಿಕೊಳ್ಳಬೇಕು ಎಂದು ವಿವೇಕಾನಂದ ಕಾಲೇಜಿನ ಆಡಳಿತ ಮಂಡಳಿ ಸಂಚಾಲಕ ಮುರಳಿಕೃಷ್ಣ ಕೆ.ಎನ್‌. ಹೇಳಿದರು.
ವಿವೇಕಾನಂದ ಕಲಾ, ವಿಜ್ಞಾನ ಹಾಗೂ ವಾಣಿಜ್ಯ (ಸ್ವಾಯತ್ತ) ಮಹಾವಿದ್ಯಾಲಯದಲ್ಲಿ 2026-27ನೇ ಶೈಕ್ಷಣಿಕ ಸಾಲಿನಲ್ಲಿ ಉಪನ್ಯಾಸಕರ ಪುನಶ್ಚೇತನ ಕಾರ್ಯಾಗಾರ ಉದ್ಘಾಟಿಸಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ಪ್ರೊ.ಶ್ರೀಪತಿ ಕಲ್ಲೂರಾಯ ಮಾತನಾಡಿ, ಅಧ್ಯಾಪಕ ವೃತ್ತಿಗೆ ಸೇರಿದ ಮೇಲೆ ಶಿಕ್ಷಕರು ಹೊಸ ಹೊಸ ವಿಚಾರಗಳನ್ನು ತಿಳಿದುಕೊಳ್ಳಬೇಕು. ಪ್ರಾಮಾಣಿಕತೆ ಮತ್ತು ಮೌಲ್ಯಯುತಜೀವನ ಕೇವಲ ಕಾಲೇಜಿಗೆ ಸೀಮಿತವಾಗದೆ ಸಾಮಾಜಿಕವಾಗಿಯೂ ಅನ್ವಯಿಸಿಕೊಳ್ಳಬೇಕು ಎಂದರು.
ಶೈಕ್ಷಣಿಕ ವರ್ಷದ ಮಾರ್ಗದರ್ಶನವನ್ನು ಕಾಲೇಜು ಪ್ರಾಂಶುಪಾಲ ಶ್ರೀಕೃಷ್ಣ ಗಣರಾಜ ಭಟ್‌ ನೀಡಿದರು. ಸಮಾಜಶಾಸ ವಿಭಾಗದ ಮುಖ್ಯಸ್ಥೆ ಡಾ.ವಿದ್ಯಾ ಎಸ್‌. ಸ್ವಾಗತಿಸಿದರು. ಕನ್ನಡ ವಿಭಾಗದ ಮುಖ್ಯಸ್ಥ ಡಾ.ಮನಮೋಹನ ಎಂ. ಕಾರ್ಯಕ್ರಮ ನಿರೂಪಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net