

ಪುತ್ತೂರು: ದುಷ್ಕರ್ಮಿಗಳಿಂದ ಬರ್ಬರ ಹತ್ಯೆಯಾದ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಅವರ ಹತ್ಯೆಯನ್ನು ವ್ಯರ್ಥವಾಗಲು ಬಿಡುವುದಿಲ್ಲ ಎಂಬ ಆಕ್ರೋಷದ ಘೋಷಣೆ ಅಂತಿಮ ಶವಯಾತ್ರೆಯಲ್ಲಿ ಕೇಳಿಬಂದಿದೆ.
ಪುತ್ತೂರು ಸರ್ಕಾ ಆಸ್ಪತ್ರೆಯಿಂದ ಮೆರವಣಿಗೆಯಲ್ಲಿ ಹೊರಟು ದರ್ಬೆ, ಸವಣೂರು ಕಾಣಿಯೂರು, ನಿಂತಿಕಲ್ಲು ಮೂಲಕ ಬೆಳ್ಳಾರೆಗೆ ಪ್ರವೀಣ್ ಅವರ ಮೃತದೇಹವನ್ನು ಕೊಂಡೊಯ್ಯಲು ಹಿಂದೂ ಸಂಘಟನೆಗಳು ಹಾಗೂ ಬಂಧು ಬಳಗದವರು ನಿರ್ಧರಿಸಿದ್ದು, ದಾರಿಯುದ್ದಕ್ಕೂ ಪೊಲೀಸ್ ಸರ್ಪಗಾವಳು ಇದೆ. ಈಮಧ್ಯೆ ಅಂತಿಮ ಶವಯಾತ್ರೆಯಲ್ಲಿ ಹಿಂದೂ ಕಾರ್ಯಕರ್ತರಿಂದ ಆಕ್ರೋಷದ ಘೋಷಣೆ ಕೇಳಿಬಂದಿದ್ದು, ಪ್ರವೀಣ್ ಅಮರ್ ರಹೇ.., ಪ್ರವೀಣ್ ನೆಟ್ಟಾರು ಹತ್ಯೆ ವ್ಯರ್ಥವಾಗಲು ಬಿಡುವುದಿಲ್ಲ ಎಂಬ ಘೋಷಣೆಗಳು ಕೇಳಿಬಂದಿದೆ.
ಬಿಜೆಪಿ ಯುವ ಮೋರ್ಚಾ ಜಿಲ್ಲಾ ಮುಖಂಡ ಪ್ರವೀಣ್ ನೆಟ್ಟಾರು ಅವರ ಬರ್ಬರ ಹತ್ಯೆಯಿಂದ ಆಕ್ರೋಶಿತರಾದ ಹಿಂದೂ ಸಂಘಟನೆಯ ಕಾರ್ಯಕರ್ತರು ಶಾಂತಿ ಕಾಪಾಡುವಂತೆ ಪೊಲೀಸರು ಮನವಿ ಮಾಡಿದ್ದಾರೆ.