ಸಾರ್ವಜನಿಕರಿಗೆ ಇಂದು ಮತ್ತೊಂದು ಸಂಕಷ್ಟ !

Hubballi Pvt Hospital OPD Bandh
Published on

ಹುಬ್ಬಳ್ಳಿ: ಸಾರಿಗೆ ನೌಕರರ ಮುಷ್ಕರದ ಕಾರಣ ಬಸ್ ಸೇವೆ ಲಭ್ಯವಿಲ್ಲದೆ ಉಂಟಾಗಿರುವ ತೊಂದರೆ ಒಂದೆಡೆಯಾದರೆ ಸಾರ್ವಜನಿಕರು ಇಂದು ಇನ್ನೂ ಒಂದು ಸಂಕಷ್ಟವನ್ನು ಎದುರಿಸುತ್ತಿದ್ದಾರೆ. ಅದು ಆರೋಗ್ಯ ಸೇವೆಗೆ ಸಂಬಂಧಿಸಿದ ಮುಷ್ಕರ ! ಆಯುರ್ವೇದ ವೈದ್ಯರಿಗೂ ಶಸ್ತ್ರ ಚಿಕಿತ್ಸೆ ಅವಕಾಶ ನೀಡಿದ್ದನ್ನು ವಿರೋಧಿಸಿ ಖಾಸಗಿ ಆಸ್ಪತ್ರೆಗಳಿಂದು ಒಪಿಡಿ ಸೇವೆ ಬಂದ್ ಮಾಡಿವೆ.

ಖಾಸಗಿ ಆಸ್ಪತ್ರೆಗಳ ಹೊರ ರೋಗಿಗಳ ವಿಭಾಗ (ಒಪಿಡಿ) ಬಂದ್ ಹಿನ್ನೆಲೆಯಲ್ಲಿ ರೋಗಿಗಳು ಪರದಾಡುವಂತಾಗಿದೆ‌. ಆಯುಷ್ ವೈದ್ಯರಿಗೂ ಶಸ್ತ್ರಚಿಕಿತ್ಸೆ ಮಾಡಲು ಅವಕಾಶ ನೀಡಿರುವ ಕೇಂದ್ರ ಸರ್ಕಾರದ ನಿರ್ಧಾರ ಖಂಡಿಸಿ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಒಪಿಡಿ ಬಂದ್ ಗೆ ಕರೆ ನೀಡಿತ್ತು ನಗರದ. 800ಕ್ಕೂ ಅಧಿಕ ವೈದ್ಯರು ಬೆಂಬಲ ನೀಡಿದ್ದಾರೆ.

ಆ ಹಿನ್ನೆಲೆಯಲ್ಲಿ ನಗರದ ಖಾಸಗಿ ಆಸ್ಪತ್ರೆಗಳು ಒಪಿಡಿ ಬಂದ್ ಮಾಡಿದ್ದಾರೆ. ಇದರಿಂದ ರೋಗಿಗಳು ಪರದಾಡುವಂತಾಗಿದೆ‌. ಒಳ ರೋಗಿಗಳೂ ವೈದ್ಯರ ಸೇವೆ ಸಿಗದೆ ಪರದಾಡುತ್ತಿದ್ದಾರೆ.

ಕ್ಷಣ ಕ್ಷಣದ ಸುದ್ದಿಗಳ ಅಪ್ಡೇಟ್ಸ್​ಗಾಗಿ ನಮ್ಮ ಫೇಸ್​ಬುಕ್​ ಪುಟ ಲೈಕ್ ಮಾಡಿ ಮತ್ತು ಫಾಲೋ ಮಾಡಿ..

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net