ತಂತ್ರಜ್ಞಾನ ಆಧಾರಿತ ಕಲಿಕೆ ವಿಧಾನ ಅನುಸರಿಸಿ

15.Pyp. 001
Published on

ಪಿರಿಯಾಪಟ್ಟಣ : ಹೊಸ ಕಾಲಘಟ್ಟದಲ್ಲಿನ ಮಕ್ಕಳ ಮನೋಭಾವಕ್ಕೆ ತಕ್ಕಂತೆ ತಂತ್ರಜ್ಞಾನ ಆಧಾರಿತ ಕಲಿಕೆ ವಿಧಾನಗಳನ್ನು ಶಿಕ್ಷಕರು ಅಳವಡಿಸಿಕೊಳ್ಳಬೇಕು ಎಂದು ಪಶು ಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ.ವೆಂಕಟೇಶ್ ತಿಳಿಸಿದರು.

ಪಟ್ಟಣದ ಆದಿಚುಂಚನಗಿರಿ ಸಮುದಾಯ ಭವನದಲ್ಲಿ ಸೋಮವಾರ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಹಾಗೂ ಗುರುವಂದನಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಶಿಕ್ಷಕರು ವೃತ್ತಿ ಬದ್ಧತೆಯನ್ನು ಮೆರೆಯುವ ಮೂಲಕ ಗ್ರಾಮೀಣ ಮಕ್ಕಳ ಶ್ರೇಯೋಭಿವೃದ್ಧಿಗೆ ಶ್ರಮಿಸಬೇಕು ಎಂದರು.

ಹೊಸ ಹೊಸ ಬೋಧನಾ ವಿಧಾನಗಳನ್ನು ಬಳಸಿಕೊಳ್ಳಲು ಈಗಾಗಲೇ ತಾಲೂಕಿನ 45 ಸರ್ಕಾರಿ ಶಾಲೆಗಳಿಗೆ ಸ್ಮಾರ್ಟ್ ಕ್ಲಾಸ್ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಯಾವುದರಲ್ಲೂ ಕಡಿಮೆ ಇಲ್ಲದಂತಹ ಸಾಧನೆಗಳನ್ನು ಮಾಡುತ್ತಿರುವುದನ್ನು ಪ್ರಶಂಸಿಸಿದರು. ಸರ್ಕಾರಿ ಶಾಲೆಗಳ ಶಿಥಿಲ ಕಟ್ಟಡಗಳನ್ನು ಹಂತ ಹಂತವಾಗಿ ದುರಸ್ತಿಗೊಳಿಸಲಾಗುತ್ತಿದೆ. ಶಿಕ್ಷಕರ ಸಮಸ್ಯೆಗಳನ್ನ ಬಗೆಹರಿಸುವ ನಿಟ್ಟಿನಲ್ಲಿ ಗಮನ ಹರಿಸಲಾಗುತ್ತದೆ ಎಂದರು.

ಮೈಸೂರು ವಿವಿ ಜೆನೆಟಿಕ್ ವಿಭಾಗದ ಮುಖ್ಯಸ್ಥರಾದ ಪ್ರೊಫೆಸರ್ ಡಾ.ಸುತ್ತೂರು ಮಾಲಿನಿ ಮತನಾಡಿ,ಶಿಕ್ಷಕರು ಪ್ರಸ್ತುತ ದಿನಗಳಲ್ಲಿ ಮಕ್ಕಳ ಆರೋಗ್ಯ ವೃದ್ಧಿ ನಿಟ್ಟಿನಲ್ಲಿ ಗಮನ ಹರಿಸಬೇಕು ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ರವಿ ಪ್ರಸನ್ನ, ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ನಿತಿನ್ ವೆಂಕಟೇಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಡಿ.ಟಿ.ಸ್ವಾಮಿ, ರೆಹಮದ್ ಜಾನ್ ಬಾಬು, ಉದ್ಯಮಿ ಬಿ.ಜೆ. ಬಸವರಾಜು, ಪಿಎಲ್ ಡಿ ಬ್ಯಾಂಕ್ ಸದಸ್ಯ ಲೋಕೇಶ್, ಬಿಆರ್‌ಸಿ ಶಿವರಾಜ್, ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮಧುರೇಶ್, ಕಾರ್ಯದರ್ಶಿ ಸೋಮಶೇಖರ್, ಸಿಆರ್‌ಪಿ ಗಣೇಶ್ ಕುಮಾರ್, ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ಎಂ.ಸಿ.ಪ್ರಶಾಂತ್ ಮತ್ತಿತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net