ಗುಣಮಟ್ಟದ ಶಿಕ್ಷಣಕ್ಕಾಗಿ ವಸತಿಯುತ ಶಾಲೆ

Quality, Education, Housing, School,
Published on

ಜಗಳೂರು: ತಾಲೂಕಿನ ಹೊಸಹಟ್ಟಿ ಗ್ರಾಮದ ಬಳಿ ನಿರ್ಮಾಣದ ಹಂತದಲ್ಲಿರುವ ಡಾ.ಬಿ.ಆರ್. ಅಂಬೇಡ್ಕರ್ ವಸತಿಯುತ ಶಾಲೆಗೆ ಗುರುವಾರ ಶಾಸಕ ಚಿಕ್ಕಮ್ಮನಹಟ್ಟಿ ಬಿ. ದೇವೇಂದ್ರಪ್ಪ ಭೇಟಿ ನೀಡಿ ಕಾಮಗಾರಿ ಪರಿಶೀಲಿಸಿದರು.

ಕ್ರೈಸ್ ಸಂಸ್ಥೆಯ ಇಂಜಿನಿಯರ್, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಬಿ. ಮಹೇಶ್ವರಪ್ಪ ಸೇರಿದಂತೆ ಅಧಿಕಾರಿಗಳ ಜತೆಗೆ ಕಟ್ಟಡ ಕಾಮಗಾರಿ ಬಗ್ಗೆ ಮಾಹಿತಿ ಪಡೆದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಗ್ರಾಮೀಣ ಭಾಗದ ಬಡ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದ ಸರ್ಕಾರ ವಸತಿಯುತ ಶಾಲೆ ಮಂಜೂರು ಮಾಡಿದೆ.

ತಾಲೂಕಿನಲ್ಲಿ ಕಿತ್ತೂರು ರಾಣಿ ಚೆನ್ನಮ್ಮ, ಮುರಾರ್ಜಿ ದೇಸಾಯಿ ಶಾಲೆ ಶಾಲೆಗಳಿದ್ದು, ಹೊಸದಾಗಿ ನಿರ್ಮಾಣವಾಗುತ್ತಿರುವ ಶಾಲೆ ಸೇರಿದಂತೆ ಒಟ್ಟು 5 ವಸತಿ ಶಾಲೆಗಳಲ್ಲಿ ಸಾವಿರಾರು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ.

ಅವಶ್ಯಕತೆ ಬಿದ್ದರೆ ವಸತಿಶಾಲೆ ಮಂಜೂರು ಮಾಡಿಸಲಾಗುವುದು ಎಂದರು.

ವಸತಿ ಶಾಲೆಗಳಲ್ಲಿ 6ರಿಂದ 10ನೇ ತರಗತಿವರೆಗೆ ಅವಕಾಶವಿದ್ದು, ಅದನ್ನು ಪಿಯುಸಿವರೆಗೆ ಹೆಚ್ಚಿಸಿದರೆ ಬಡ ಮಕ್ಕಳಿಗೆ ಅನುಕೂಲವಾಗಲಿದೆ ಎಂಬ ಮನವಿಗೆ ಉತ್ತರಿಸಿ, ಇದು ರಾಜ್ಯಕ್ಕೆ ಸಂಬಂಧಪಟ್ಟಿದ್ದು, ಸದನದಲ್ಲಿ ಈ ಬಗ್ಗೆ ಪ್ರಸ್ತಾಪ ಮಾಡಲಾಗುವುದು ಎಂದರು.

ಸಮಾಜ ಕಲ್ಯಾಣಾಧಿಕಾರಿ ಬಿ. ಮಹೇಶ್ವರಪ್ಪ, ಇಂಜಿನಿಯರ್ ಚೇತನ್, ಕೆಪಿಸಿಸಿ ಸದಸ್ಯ ಕಲ್ಲೇಶ್‌ರಾಜ್ ಪಟೇಲ್, ಜಿಲ್ಲಾ ಕಾರ್ಯದರ್ಶಿ ಪಲ್ಲಾಗಟ್ಟೆ ಶೇಖರಪ್ಪ, ನಿವೃತ್ತ ಅಧಿಕಾರಿ ಸಿ. ತಿಪ್ಪೇಸ್ವಾಮಿ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net