ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ

Published on

ಸೋಮವಾರಪೇಟೆ: ಚೌಡ್ಲು ಸರ್ಕಾರಿ ಹಿರಿಯ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವ ಸಮಾರಂಭ ಶುಕ್ರವಾರ ಸಂಭ್ರಮದಿಂದ ನಡೆಯಿತು.


ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಚೌಡ್ಲು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗೀತಾ ಶಶಿಕುಮಾರ್, ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ಸಿಗುತ್ತಿದೆ. ಪಾಲಕರು ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ದಾಖಲು ಮಾಡುವ ಮನಸ್ಸು ಮಾಡಬೇಕು. ಆ ಮೂಲಕ ಸರ್ಕಾರಿ ಶಾಲೆಗಳ ಉಳಿವಿಗೆ ಶ್ರಮಿಸಬೇಕು. ಶಾಲೆಯ ಅಭಿವೃದ್ಧಿಗೆ ಗ್ರಾಪಂನಿಂದ ಸಹಕಾರ ನೀಡಲಾಗುವುದು ಎಂದರು.


ವಾರ್ಷಿಕೋತ್ಸವ ಅಂಗವಾಗಿ ಶಾಲಾ ವಿದ್ಯಾರ್ಥಿಗಳು ಮತ್ತು ಪಾಲಕರಿಗೆ ವಿವಿಧ ಆಟೋಟ ಸ್ಪರ್ಧೆಗಳು ನಡೆದವು. ಕ್ರೀಡಾಕೂಟಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಚೌಡ್ಲು ಗ್ರಾಪಂನಿಂದ ಕ್ರೀಡಾ ಪರಿಕರಗಳನ್ನು ಶಾಲೆಗೆ ಹಸ್ತಾಂತರಿಸಲಾಯಿತು.


ರಾಜ್ಯ ಶಿಕ್ಷಕರ ಸಂಘದ ನಿರ್ದೇಶಕ ಯೋಗೇಶ್, ನಿವೃತ್ತ ಮುಖ್ಯಶಿಕ್ಷಕಿಯರಾದ ತಂಗಮ್ಮ, ವಿಶಾಲಾಕ್ಷಿ, ಮುಖ್ಯಶಿಕ್ಷಕಿ ಪ್ರೇಮಾ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರಾಜೇಶ್, ಮುಖ್ಯಶಿಕ್ಷಕ ರಾಜಣ್ಣ, ಗ್ರಾಪಂ ಸದಸ್ಯರಾದ ಮಂಜುಳಾ ಸುಬ್ರಮಣಿ, ಪ್ರವೀಣ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪೂರ್ಣಕುಮಾರ್, ಶಿಕ್ಷಕರಾದ ಶಶಿಕಲಾ, ಮಮತಾ, ಸ್ವರ್ಣಲತಾ ಇದ್ದರು. ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಆನಂದ್ ಅವರನ್ನು ಶಾಲಾಭಿವೃದ್ಧಿ ಸಮಿತಿ, ಭಾರತೀಯ ಯುವಕ ಸಂಘದ ಪದಾಧಿಕಾರಿಗಳು ಸನ್ಮಾನಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net