

ಪುತ್ತೂರು ಗ್ರಾಮಾಂತರ: ಪಾಲಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಕಳುಹಿಸುವಷ್ಟರ ಮಟ್ಟಿಗೆ ಗುಣಮಟ್ಟದ ಶಿಕ್ಷಣ ದೊರೆಯುವ ವಾತಾವರಣ ಸೃಷ್ಟಿಯಾದರೆ ಸರ್ಕಾರಿ ಶಾಲೆಗಳು ಉಳಿಯಲು ಸಾಧ್ಯ, ಈ ನಿಟ್ಟಿನಲ್ಲಿ ಸರ್ಕಾರ ಮತ್ತು ಪಾಲಕರು ಜಂಟಿಯಾಗಿ ಕೆಲಸ ಮಾಡಬೇಕು ಎಂದು ಪುತ್ತೂರು ಶಾಸಕ ಅಶೋಕ್‌ಕುಮಾರ್ ರೈ ಹೇಳಿದರು.
ನರಿಮೊಗರು ಗ್ರಾಮದ ಮುಕ್ವೆ ಸರ್ಕಾರಿ ಹಿರಿಯ ಶಾಲೆಯಲ್ಲಿ ಎಂಆರ್‌ಪಿಎಲ್ ಸಂಸ್ಥೆಯ 30 ಲಕ್ಷ ರೂ. ಸಿಎಸ್‌ಆರ್ ಫಂಡ್‌ನಲ್ಲಿ ನಿರ್ಮಾಣ ಮಾಡಲು ಉದ್ದೇಶಿಸಿರುವ ಶಾಲಾ ಕೊಠಡಿಗೆ ಶಿಲಾನ್ಯಾಸಗೈದು ಮಾತನಾಡಿ, ಶಾಲೆಗೆ 3 ಲಕ್ಷ ರೂ. ಅನುದಾನ ನೀಡುವುದಾಗಿ ಘೋಷಿಸಿದರು.
ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ ಮಾತನಾಡಿದರು. ಎಸ್‌ಡಿಎಂಸಿ ಅಧ್ಯಕ್ಷ ಮುಬೀನ್ ಸಾಹೇಬ್ ಅಧ್ಯಕ್ಷತೆ ವಹಿಸಿದ್ದರು. ನರಿಮೊಗರು ಗ್ರಾಪಂ ಸದಸ್ಯ ಕಲಂದರ್ ಶಾಫಿ, ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ನವೀನ್ ವೇಗಸ್, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸೋಮನಾಥ ಗೌಡ ಉಪಸ್ಥಿತರಿದ್ದರು.
ಮುಖ್ಯಶಿಕ್ಷಕಿ ಕಾರ್ಮೆಲಸ್ ಅಂದ್ರಜೆ ಸ್ವಾಗತಿಸಿದರು. ಎಸ್‌ಡಿಎಂಸಿ ಉಪಾಧ್ಯಕ್ಷ ಕೃಷ್ಣಪ್ಪ ಪೂಜಾರಿ ವಂದಿಸಿದರು. ಖಾಲಿದ್ ಹಾಗೂ ಚರಣ್ ಕುಮಾರ್ ನಿರೂಪಿಸಿದರು.