ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ

sharadotsava
ಹೆಬ್ರಿ ಸಮೀಪದ ಮುದ್ರಾಡಿ ಶ್ರೀ ಗುರುರಕ್ಷಾದ ಆವರಣದಲ್ಲಿ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ಮುದ್ರಾಡಿ ವತಿಯಿಂದ ಶುಕ್ರವಾರ 5ನೇ ವರ್ಷದ ಶ್ರೀ ಶಾರದೋತ್ಸವ ಸಂಭ್ರಮದಲ್ಲಿ ವಿವಿಧ ಕ್ಷೇತ್ರಗಳ ಸಾಧಕರನ್ನು ಗೌರವಿಸಲಾಯಿತು.
Published on

ವಿಜಯವಾಣಿ ಸುದ್ದಿಜಾಲ ಹೆಬ್ರಿ

ನಾವೆಲ್ಲ ಸರ್ಕಾರಿ ಶಾಲೆಯಲ್ಲೇ ಕಲಿತು ಮುಂದೆ ಬಂದಿದ್ದೇವೆ. ಈಗ ಖಾಸಗಿ ಶಾಲೆಗಳ ಪೈಪೋಟಿಯಿಂದ ಬಡವರು ಶಿಕ್ಷಣ ಪಡೆಯುವುದು ಕಷ್ಟವಾಗುತ್ತಿದೆ. ಸ್ಥಿತಿವಂತರು ಸರ್ಕಾರಿ ಶಾಲೆಗಳಿಗೆ ಮೂಲ ಸೌಕರ್ಯ ಒದಗಿಸುವ ಮೂಲಕ ಉನ್ನತ ಗುಣಮಟ್ಟದ ಶಿಕ್ಷಣ ದೊರೆಯುವಂತೆ ಮಾಡಬೇಕು ಎಂದು ಹೆಬ್ರಿ ಸರ್ಕಾರಿ ಶಾಲೆಗಳ ಅಭಿವೃದ್ಧಿ ರೂವಾರಿ ಉದ್ಯಮಿ ಎಚ್.ಸತೀಶ್ ಪೈ ಹೇಳಿದರು.

ಮುದ್ರಾಡಿ ಶ್ರೀ ಗುರುರಕ್ಷಾದ ಆವರಣದಲ್ಲಿ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ಮುದ್ರಾಡಿ ವತಿಯಿಂದ ಶುಕ್ರವಾರ ನಡೆದ 5ನೇ ವರ್ಷದ ಶ್ರೀ ಶಾರದೋತ್ಸವ ಸಂಭ್ರಮ ಉದ್ಘಾಟಿಸಿ ಮಾತನಾಡಿದರು.

ಸಂಪನ್ಮೂಲ ವ್ಯಕ್ತಿ ಚಿಂತಕ ಮುನಿರಾಜ ರೆಂಜಾಳ ಮಾತನಾಡಿದರು. ಮುದ್ರಾಡಿ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ಅಧ್ಯಕ್ಷ ಮುದ್ರಾಡಿ ಮಂಜುನಾಥ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಗಣ್ಯರು, ವಿವಿಧ ಕ್ಷೇತ್ರದ ಸಾಧಕರ ಸನ್ಮಾನ, ಮುದ್ರಾಡಿ ಶಾರದೋತ್ಸವ ಪುರಸ್ಕಾರ 2024 ಪ್ರದಾನ ಮತ್ತು ಶೈಕ್ಷಣಿಕ ಸಾಧಕರಿಗೆ ಪ್ರತಿಭಾ ಪುರಸ್ಕಾರ ನಡೆಯಿತು.

ಮುದ್ರಾಡಿ ಗ್ರಾಪಂ ಅಧ್ಯಕ್ಷೆ ವಸಂತಿ ಪೂಜಾರಿ, ಕಾಡುಹೊಳೆಯ ಉದ್ಯಮಿ ಮಂಜುನಾಥ ಕೆ., ಹೆಬ್ರಿ ಎಸ್.ಆರ್ ಸಮೂಹ ಶಿಕ್ಷಣ ಸಂಸ್ಥೆ ಅಧ್ಯಕ್ಷ ಎಚ್.ನಾಗರಾಜ ಶೆಟ್ಟಿ, ನಿವೃತ್ತ ಲೆಫ್ಟಿನೆಂಟ್ ಕರ್ನಲ್ ಜಗದೀಶ್ ಜರ್ವತ್ತು, ಉಡುಪಿ ಉದ್ಯಮಿ ತಾರಾನಾಥ ಕೋಟ್ಯಾನ್, ವರಂಗ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಲಕ್ಷ್ಮಣ ಆಚಾರ್ಯ, ಸಮಾಜ ಸೇವಕ ಗ್ರಾಪಂ ಸದಸ್ಯ ಗಣಪತಿ ಮುದ್ರಾಡಿ, ಸಮಿತಿ ಉಪಾಧ್ಯಕ್ಷ ಚಂದ್ರಶೇಖರ ಬಾಯರಿ ಉಪಸ್ಥಿತರಿದ್ದರು.

ಡ್ರಾಮಾ ಜ್ಯೂನಿಯರ್ ಸೀಸನ್ 5ರ ವಿಜೇತೆ ರಿಷಿಕಾ ಕುಂದೇಶ್ವರ ಅವರಿಂದ ಕಾರ್ಯಕ್ರಮ ವೈವಿಧ್ಯ ಸೇರಿದಂತೆ, ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಭಜನಾ ತಂಡಗಳ ಕುಣಿತ ಭಜನೆಯೊಂದಿಗೆ ಶಾರದಾ ಮಾತೆಯ ಭವ್ಯ ಶೋಭಾಯಾತ್ರೆ ನಡೆಯಿತು.

ಚೈತ್ರಾ ಕಬ್ಬಿನಾಲೆ, ಮಾತಿಬೆಟ್ಟು ಪ್ರಕಾಶ ಪೂಜಾರಿ, ಬಲ್ಲಾಡಿ ಚಂದ್ರಶೇಖರ ಭಟ್ ಕಾರ್ಯಕ್ರಮ ನಿರೂಪಿಸಿ, ಕಬ್ಬಿನಾಲೆ ಚಂದ್ರಶೇಖರ ಬಾಯರಿ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net