ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ

5 TKE 2(SCHOOL)
Published on

ತರೀಕೆರೆ: ವೃತ್ತಿ ಜೀವನದಲ್ಲಿ 31ವರ್ಷಗಳ ಸಾರ್ಥಕ ಸೇವೆ ಆತ್ಮತೃಪ್ತಿ ನೀಡಿದೆ ಎಂದು ಮುಖ್ಯಶಿಕ್ಷಕ ಜಿ.ಪಿ.ಜಯಣ್ಣ ಹೇಳಿದರು.

ಎ.ರಂಗಾಪುರ ಸರ್ಕಾರಿ ಶಾಲೆಯಲ್ಲಿ ಎಸ್‌ಡಿಎಂಸಿಯಿಂದ ಏರ್ಪಡಿಸಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿ, ಸರ್ಕಾರಿ ಶಾಲೆಗಳು ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಹಿಂದೆ ಬಿದ್ದಿಲ್ಲ. ಆದರೂ ಪಾಲಕರ ತಾತ್ಸಾರದಿಂದ ಮಕ್ಕಳ ದಾಖಲಾತಿಯಲ್ಲಿ ಏರಿಳಿತ ಕಂಡು ಬರುತ್ತಿದೆ. ಪಾಲಕರು ಇಂಗ್ಲಿಷ್ ವ್ಯಾಮೋಹದಿಂದ ಖಾಸಗಿ ಶಾಲೆಗಳ ಕಡೆ ಆಕರ್ಷಿತರಾಗುತ್ತಿದ್ದಾರೆ. ಮಕ್ಕಳನ್ನು ಸರ್ಕಾರಿ ಶಾಲೆಗೆ ಕಳಿಸಿ ಭವಿಷ್ಯಕ್ಕೆ ಭದ್ರ ಬುನಾದಿ ಹಾಕಬೇಕು ಎಂದರು.

ಕರ್ತವ್ಯ ನಿರತ ಸರ್ಕಾರಿ ಶಾಲಾ ಶಿಕ್ಷಕರು ಸಹ ಸಮರ್ಪಣಾ ಮನೋಭಾವದಿಂದ ಸೇವೆ ಸಲ್ಲಿಸಿ ಮಕ್ಕಳ ಜತೆ ಪಾಲಕರನ್ನು ಸೆಳೆಯುವ ಪ್ರಯತ್ನ ಮಾಡಬೇಕು. ಹೀಗಾದಾಗ ಮಾತ್ರ ಸರ್ಕಾರಿ ಶಾಲೆಗಳ ಉಳಿವು ಸಾಧ್ಯ ಎಂದು ಹೇಳಿದರು.

ಗ್ರಾಪಂ ಸದಸ್ಯೆ ಸುಂಕಮ್ಮ, ಮಾಜಿ ಅಧ್ಯಕ್ಷ ಅಣ್ಣಪ್ಪ, ನೌಕರರ ಸಂಘದ ತಾಲೂಕು ಅಧ್ಯಕ್ಷ ಸಿ.ಆರ್.ಅನಂತಪ್ಪ, ನಿರ್ದೇಶಕ ಎಂ.ಬಿ.ರಾಮಚಂದ್ರಪ್ಪ, ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎಸ್.ಧರಣೇಶ್, ಕಾರ್ಯದರ್ಶಿ ಆನಂದ್, ಎಸ್‌ಡಿಎಂಸಿ ಅಧ್ಯಕ್ಷ ಸದಾಶಿವಪ್ಪ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net