ಪ್ರಾದೇಶಿಕ ಅಸಮತೋಲನ ನಿವಾರಣೆಗೆ ಗುಣಮಟ್ಟದ ಶಿಕ್ಷಣ ಅಗತ್ಯ

1 Dwd 5
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ಹಲವು ರಾಜ್ಯಗಳು ಪ್ರಾದೇಶಿಕ ಅಸಮತೋಲನ ಹೊಂದಿವೆ. ರಾಜ್ಯದ ಕಲ್ಯಾಣ ಕರ್ನಾಟಕ ಭಾಗವು ಹಿಂದುಳಿದ ಪ್ರದೇಶವಾಗಿದೆ. ಪ್ರಾದೇಶಿಕ ಅಸಮತೋಲನ ನಿವಾರಣೆ ಆಗಬೇಕಾದರೆ ಗುಣಮಟ್ಟದ ಶಿಕ್ಷಣ ಅವಶ್ಯಕ ಎಂದು ಬಹುಶಿಸ್ತಿಯ ಸಂಶೋಧನಾ ಅಭಿವೃದ್ಧಿ ಕೇಂದ್ರದ (ಸಿಎಂಡಿಆರ್) ನಿರ್ದೇಶಕ ಪ್ರೊ. ಬಸವಪ್ರಭು ಜಿರಲಿ ಹೇಳಿದರು.

ನಗರದ ಕರ್ನಾಟಕ ವಿಶ್ವವಿದ್ಯಾಲಯದ ಅರ್ಥಶಾಸ್ತ್ರ ವಿಭಾಗವು ಇಲ್ಲಿನ ಸಿಎಂಡಿಆರ್ ಸಹಯೋಗದಲ್ಲಿ ಅರ್ಥಶಾಸ್ತç ವಿಭಾಗದ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ `ಕರ್ನಾಟಕದಲ್ಲಿ ಪ್ರಾದೇಶಿಕ ಅಸಮತೋಲನ ಪುನರ್ ವಿಮರ್ಶೆ' ವಿಷಯ ಕುರಿತ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸರ್ಕಾರ ಜಾರಿಗೆ ತಂದಿರುವ ಯೋಜನೆಗಳು ಸಮರ್ಪಕವಾಗಿ ಅನುಷ್ಠಾನಗೊಳ್ಳಬೇಕು ಎಂದರು.

ಪ್ರಾದೇಶಿಕ ಅಸಮತೋಲನ ನಿವಾರಣಾ ಸಮಿತಿ ಸದಸ್ಯ ಪ್ರೊ. ಎಸ್.ಟಿ. ಬಾಗಲಕೋಟಿ ಮಾತನಾಡಿ, ಪ್ರಾದೇಶಿಕ ಅಸಮತೋಲನ ನಿವಾರಣೆಗೆ ಸರ್ಕಾರಗಳು ಸಕಾಲದಲ್ಲಿ ಸೂಕ್ತ ಯೋಜನೆ ರೂಪಿಸಿ ಅನುಷ್ಠಾನ ಮಾಡಬೇಕು ಇಲ್ಲದಿದ್ದರೆ ಜನರಲ್ಲಿ ಸರ್ಕಾರಗಳ ಕರ್ಯವೈಖರಿ ಕುರಿತು ಹತಾಶ ಭಾವನೆ ಮೂಡುತ್ತದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಬಿ.ಎಚ್. ನಾಗೂರ ಮಾತನಾಡಿ, ಪ್ರಾದೇಶಿಕ ಅಸಮತೋಲನ ನಿವಾರಣಾ ಹೋರಾಟ ಮತ್ತು ಕರ್ನಾಟಕದ ಅಭಿವೃದ್ಧಿಯಲ್ಲಿ ಡಾ. ನಂಜು0ಡಪ್ಪನವರ ಪಾತ್ರ ಪ್ರಮುಖ. ಅವರು ರಾಜ್ಯದ ಸುಸ್ಥಿರ ಅಭಿವೃದ್ಧಿಗಾಗಿ ಬಹಳಷ್ಟು ಶ್ರಮಿಸಿದ್ದಾರೆ ಎಂದರು.

ಅರ್ಥಶಾಸ್ತç ವಿಭಾಗದ ಡಾ. ಮನೋಜ ಡೊಳ್ಳಿ, ಡಾ. ಎಂ.ಆರ್. ಕುಲಕರ್ಣಿ, ಡಾ. ಬ್ರಹ್ಮಾನಂದ, ಡಾ. ನಾಗರಾಜ ಮುದೇನೂರ, ಡಾ. ನಾರಾಯಣ, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net