

ದೇವದುರ್ಗ: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಶಿಕ್ಷಕರ ಜತೆ ಪಾಲಕರ ಸಹಕಾರ ಅತ್ಯಗತ್ಯವಾಗಿದೆ ಎಂದು ಮುಖ್ಯಶಿಕ್ಷಕಿ ಪವಿತ್ರಾ ಹೇಳಿದರು.
ಪಟ್ಟಣದ ಪಟೇಲ್ ಓಣಿಯ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಕೇಂದ್ರ ಪಿಎಂಶ್ರೀ ಯೋಜನೆಯಡಿ ಎಲ್‌ಕೆಜಿ-ಯುಕೆಜಿ ತರಗತಿ ಪ್ರಾರಂಭ ಹಿನ್ನೆಲೆಯಲ್ಲಿ ಕರೆದಿದ್ದ ಪಾಲಕರ ಸಭೆಯಲ್ಲಿ ಸೋಮವಾರ ಮಾತನಾಡಿದರು.
ಇದನ್ನು ಓದಿ: ಸದಸ್ಯರ ಸಹಕಾರದಿಂದ ಸಂಘ ಮತ್ತಷ್ಟು ಅಭಿವೃದ್ಧಿ
ಪ್ರತಿ ಮಗುವನ್ನು ಕಲಿಕೆಯಲ್ಲಿ ತೊಡಗಿಸುವುದು ಮುಖ್ಯ. ಮಗುವಿನ ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳ ಬಗ್ಗೆ ಪಾಲಕರು ನಿರಂತರ ಗಮನಹರಿಸಬೇಕು. ಮಗುವಿನ ಉಜ್ವಲ ಭವಿಷ್ಯಕ್ಕೆ ಪಾಲಕರ ಸಹಕಾರ ಮುಖ್ಯವಾಗಿದೆ. ಪಿಎಂಶ್ರೀ ಯೋಜನೆಯಡಿ 2024-25ನೇ ಸಾಲಿನಲ್ಲಿ ಎಲ್‌ಕೆಜಿ ಶಾಲೆ ಪ್ರಾರಂಭಗೊಂಡಿದೆ.
ಪಾಲಕರು ಇಂಗ್ಲೀಷ್ ವ್ಯಾಮೋಹದಿಂದ ದುಬಾರಿ ಹಣ ನೀಡಿ ಖಾಸಗಿ ಶಾಲೆಗಳಿಗೆ ತಮ್ಮ ಮಕ್ಕಳನ್ನು ದಾಖಲು ಮಾಡುವ ಬದಲು ಸರ್ಕಾರಿ ಶಾಲೆಯಲ್ಲಿ ದಾಖಲಿಸಿ ಸರ್ಕಾರದ ಯೋಜನೆಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.