ಗುಣಮಟ್ಟ ಶಿಕ್ಷಣಕ್ಕೆ ಆದ್ಯತೆ ನೀಡಿ

12 Ylb 02
ಯಲಬುರ್ಗಾದ ಅಕ್ಷಯ ಎಜುಕೇಷನ್ ಗ್ರಾಮೀಣಾಭಿವೃದ್ಧಿ ಸಂಸ್ಥೆಯ 14ನೇ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ತಹಸೀಲ್ದಾರ್ ಬಸವರಾಜ ತೆನ್ನಳ್ಳಿ ಉದ್ಘಾಟಿಸಿದರು. ಜಿಪಂ ಮಾಜಿ ಸಾಮಾಜಿಕ ಸ್ಥಾಯಿ ಸಮಿತಿ ಅಧ್ಯಕ್ಷ ಅರವಿಂದಗೌಡ ಪಾಟೀಲ್, ಸಂಸ್ಥೆಯ ಉಪಾಧ್ಯಕ್ಷ ಡಾ.ಶಿವನಗೌಡ ದಾನರಡ್ಡಿ, ನಿರ್ದೇಶಕರಾದ ಕಲ್ಲನಗೌಡ ಓಜನಹಳ್ಳಿ, ಡಾ.ಶಂಕರ ಕಟ್ಟಿ ಇದ್ದರು.
Published on

ಯಲಬುರ್ಗಾ: ಶಿಕ್ಷಣದಿಂದ ಮಾತ್ರ ಸಮಾಜದಲ್ಲಿ ಬದಲಾವಣೆ ತರಲು ಸಾಧ್ಯ ಎಂದು ತಹಸೀಲ್ದಾರ್ ಬಸವರಾಜ ತೆನ್ನಳ್ಳಿ ಹೇಳಿದರು.

ಪಟ್ಟಣದ ಅಕ್ಷಯ್ ಪಬ್ಲಿಕ್ ಸ್ಕೂಲ್‌ನಲ್ಲಿ ಹಮ್ಮಿಕೊಂಡಿದ್ದ ಅಕ್ಷಯ ಎಜುಕೇಷನ್ ಗ್ರಾಮೀಣಾಭಿವೃದ್ಧಿ ಸಂಸ್ಥೆಯ 14ನೇ ವರ್ಷದ ವಾರ್ಷಿಕೋತ್ಸವದಲ್ಲಿ ಶನಿವಾರ ಮಾತನಾಡಿದರು.

ವಿದ್ಯೆಯಿಂದ ಜಗತ್ತು ಆಳಬಹುದು ಎನ್ನುವುದಕ್ಕೆ ಅನೇಕ ನಿದರ್ಶನಗಳನ್ನು ಕಾಣಬಹುದು. ಪ್ರತಿಯೊಬ್ಬ ಪಾಲಕರು ಮಕ್ಕಳಿಗೆ ಶಿಕ್ಷಣ ಕೊಡಿಸುವ ಮೂಲಕ ವಿದ್ಯಾವಂತರನ್ನಾಗಿಸಿ. ಶಿಕ್ಷಣ ಸಂಸ್ಥೆಗಳು ಗುಣಮಟ್ಟದ ಶಿಕ್ಷಣ ನೀಡುತ್ತಿರುವುದು ಗಮನಾರ್ಹ ಸಂಗತಿ. ಕಳೆದ ಒಂದೂವರೆ ದಶಕದಿಂದ ಅಕ್ಷಯ ಪಬ್ಲಿಕ್ ಶಾಲೆ ಬಡಮಕ್ಕಳಿಗೆ ಒಳ್ಳೆಯ ವಿದ್ಯೆ ನೀಡುತ್ತಿರುವುದು ಮೆಚ್ಚುವಂಥದ್ದು ಎಂದರು.

ಜಿಪಂ ಮಾಜಿ ಸಾಮಾಜಿಕ ಸ್ಥಾಯಿ ಸಮಿತಿ ಅಧ್ಯಕ್ಷ ಅರವಿಂದಗೌಡ ಪಾಟೀಲ್ ಮಾತನಾಡಿ, ಶಿಕ್ಷಣ ಮಕ್ಕಳಿಗೆ ಭದ್ರ ಬುನಾದಿ ಆಗಿದೆ. ಕಲಿಕಾ ಹಂತದಲ್ಲಿ ಓದಿನತ್ತ ಹೆಚ್ಚು ಆಸಕ್ತಿ ಮೂಡಿಸಲು ಮಕ್ಕಳಿಗೆ ಪ್ರೇರಣೆ ನೀಡಬೇಕು ಎಂದರು.

ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಸಿಪಿಐ ಮೌನೇಶ್ವರ ಮಾಲಿಪಾಟೀಲ್, ಸಂಸ್ಥೆಯ ಅಧ್ಯಕ್ಷ ಪ್ರಕಾಶ ಬೆಲೇರಿ, ಉಪಾಧ್ಯಕ್ಷ ಡಾ.ಶಿವನಗೌಡ ದಾನರಡ್ಡಿ, ಕಾರ್ಯದರ್ಶಿ ಸುಧೀರ ಕೊರ್ಲಳ್ಳಿ, ನಿರ್ದೇಶಕರಾದ ಕಲ್ಲನಗೌಡ ಓಜನಹಳ್ಳಿ, ಡಾ.ಶಂಕರ ಕಟ್ಟಿ, ಪವನಕುಮಾರ ಗುಡೂರ, ಮುಖ್ಯಶಿಕ್ಷಕಿ ಸವಿತಾ ಓಜನಹಳ್ಳಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net