ತಂತ್ರಜ್ಞಾನ ಅಭಿವೃದ್ಧಿಯಾದರೂ ಉತ್ತಮ ಆಹಾರ ಅಲಭ್ಯ

IMG-20240110-WA0305
Published on

ಆಲೂರು: ಮಹಿಳೆಯರು ಆರೋಗ್ಯವಂತಾಗಿದ್ದರೆ ಸ್ವಾಸ್ಥೃ ಸಮಾಜ ನಿರ್ಮಾಣ ಸಾಧ್ಯ. ಆದರೆ, ಇತ್ತೀಚೆಗೆ ಕಲುಷಿತ ಆಹಾರದಿಂದ ರೋಗಗಳು ಹೆಚ್ಚುತ್ತಿವೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ನಿಸಾರ ಫಾತಿಮಾ ಹೇಳಿದರು.


ತಾಲೂಕಿನ ಕುಂದೂರು ಹೋಬಳಿ ಚನ್ನಾಪುರ ಗ್ರಾಮದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ, ಐಸಿಟಿಸಿ ಕೇಂದ್ರ ಸಹಯೋಗದಲ್ಲಿ ಕುಂದೂರು ಹೋಬಳಿ ಚನ್ನಾಪುರ ಗ್ರಾಮದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆಯೋಜಿಸಿದ್ದ ಸಾಮೂಹಿಕ ಸೀಮಂತ ಮತ್ತು ಆರೋಗ್ಯ ಶಿಬಿರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.


ತಂತ್ರಜ್ಞಾನ ಅಭಿವೃದ್ಧಿಯಾದರೂ ಉತ್ತಮ ಆಹಾರ ಸಿಗುತ್ತಿಲ್ಲ. ಗರ್ಭಿಣಿಯರಿಗೆ ಪೌಷ್ಟಿಕಾಂಶ ಆಹಾರ ಅವಶ್ಯವಿದೆ. ಈ ನಿಟ್ಟಿನಲ್ಲಿ ಸರ್ಕಾರ ಹಲವು ಕಾರ್ಯಕ್ರಮಗಳನ್ನು ರೂಪಿಸಿದೆ. ಇವುಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.


ಕುಂದೂರು-ಚನ್ನಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಸ್ನೇಹಾ ಮಾತನಾಡಿ, ಆರೋಗ್ಯ ಇಲಾಖೆಯಲ್ಲಿ ವಿಶೇಷವಾಗಿ ತಾಯಿ ಮಕ್ಕಳ ಆರೋಗ್ಯ ಕಾರ್ಯಕ್ರಮಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಶಿಶು ಹಾಗೂ ತಾಯಿ ಮರಣವನ್ನು ನಿಯಂತ್ರಿಸುವಲ್ಲಿ ಇಲಾಖೆ ಮಹತ್ವದ ಕಾರ್ಯನಿರ್ವಹಿಸುತ್ತಿದೆ ಎಂದು ತಿಳಿಸಿದರು.


ಕುಂದೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶೈಲಜಾ, ಸದಸ್ಯ ರವೀಂದ್ರ, ಗಂಜಿಗೆರೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಶಾಲಿನಿ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಸತೀಶ್, ಐಸಿಟಿಸಿ ಆಪ್ತ ಸಮಾಲೋಚಕರಾದ ಗೌರಿ, ಲೋಕೇಶ್, ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net