ಗ್ರಾಮೀಣ ಜನತೆಗೆ ಗುಣಮಟ್ಟದ ಆರೋಗ್ಯ ಸೇವೆ

yashpal
ಉಡುಪಿಯ ನಿಡಂಬಳ್ಳಿಯಲ್ಲಿ ಆರೋಗ್ಯ ಸ್ವಾಸ್ಥ್ಯ ಕೇಂದ್ರ ನಿರ್ವಾಣಕ್ಕೆ ಯಶ್‌ಪಾಲ್ ಸುವರ್ಣ ಭೂಮಿಪೂಜೆ ನೆರವೇರಿಸಿದರು.
Published on

ವಿಜಯವಾಣಿ ಸುದ್ದಿಜಾಲ ಉಡುಪಿ

ಕೇಂದ್ರ ಬಿಜೆಪಿ ಸರ್ಕಾರದ ಆಯುಷ್ಮಾನ್ ಆರೋಗ್ಯ ಮಂದಿರ ಯೋಜನೆಯಡಿ ಗ್ರಾಮೀಣ ಭಾಗದ ಜನತೆಗೂ ಗುಣಮಟ್ಟದ ಆರೋಗ್ಯ ಸೇವೆ ಲಭಿಸಬೇಕಿದೆ. ಆ ನಿಟ್ಟಿನಲ್ಲಿ ನಿಡಂಬಳ್ಳಿಯಲ್ಲಿ ಶ್ರೀದಲ್ಲೇ ಆರೋಗ್ಯ ಸ್ವಾಸ್ಥ್ಯ ಕೇಂದ್ರ ನಿರ್ವಾಣಗೊಳ್ಳಲಿದ್ದು, ಈ ಭಾಗದ ಜನರಿಗೆ ಉತ್ತಮ ಸೇವೆ ನೀಡಲಾಗುವುದು ಎಂದು ಶಾಸಕ ಯಶ್‌ಪಾಲ್ ಸುವರ್ಣ ಭರವಸೆ ನೀಡಿದರು.

ಉಡುಪಿ ತಾಲೂಕಿನ ಕಲ್ಯಾಣಪುರ ಗ್ರಾಪಂ ವ್ಯಾಪ್ತಿಯ ನಿಡಂಬಳ್ಳಿ ಗ್ರಾಮದಲ್ಲಿ ಸುವಾರು 65 ಲಕ್ಷ ರೂ. ವೆಚ್ಚದಲ್ಲಿ ನಿರ್ವಾಣಗೊಲ್ಲಿರುವ ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರ ಕಾಮಗಾರಿಗೆ ಶನಿವಾರ ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದರು.

ಕಲ್ಯಾಣಪುರ ಗ್ರಾಪಂ ಅಧ್ಯಕ್ಷ ನಾಗರಾಜ್ ಕುಂದರ್, ಉಪಾಧ್ಯಕ್ಷೆ ಪ್ರೇಮಲತಾ, ಗಣಪತಿ ವ್ಯವಸಾಯ ಸೇವಾ ಸಹಕಾರಿ ಸಂ ಅಧ್ಯಕ್ಷ ಸತೀಶ್ ಶೆಟ್ಟಿ, ಗ್ರಾಪಂ ಸದಸ್ಯರಾದ ಕೃಷ್ಣ ದೇವಾಡಿಗ, ಸತೀಶ್ ನಾಯ್ಕ, ನವೀನ್ ಕಾಂಚನ್, ಜಾನ್ಸನ್, ಪ್ರಶಾಂತ್, ಅನಿತಾ, ರತ್ನಾ ಕೇಶವ್, ಹಿರಿಯ ಕಾರ್ಯಕರ್ತರಾದ ಗುರುರಾಜ್ ಗಾಣಿಗ, ಶ್ರೀಧರ್ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳು, ಗ್ರಾಮದ ಜನರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net