ಖರೀದಿ ಕೇಂದ್ರಗಳಲ್ಲಿ ಗುಣಮಟ್ಟ ಪರಿಶೀಲನೆ ಕಡ್ಡಾಯ

ಹೊಳೆನರಸೀಪುರದ ಎಪಿಎಂಸಿ ಆವರಣದಲ್ಲಿ ಭತ್ತ ಹಾಗೂ ರಾಗಿ ಖರೀದಿ ಕೇಂದ್ರಕ್ಕೆ ಶಾಸಕ ಎಚ್.ಡಿ.ರೇವಣ್ಣ ಚಾಲನೆ ನೀಡಿದರು.
ಹೊಳೆನರಸೀಪುರದ ಎಪಿಎಂಸಿ ಆವರಣದಲ್ಲಿ ಭತ್ತ ಹಾಗೂ ರಾಗಿ ಖರೀದಿ ಕೇಂದ್ರಕ್ಕೆ ಶಾಸಕ ಎಚ್.ಡಿ.ರೇವಣ್ಣ ಚಾಲನೆ ನೀಡಿದರು.
Published on

ಹೊಳೆನರಸೀಪುರ: ಸರ್ಕಾರ ಕೃಷಿ ಉತ್ಪನ್ನಗಳನ್ನು ಬೆಂಬಲ ಬೆಲೆಯಡಿ ಖರೀದಿ ಮಾಡುತ್ತಿದ್ದು, ರೈತರು ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಶಾಸಕ ಎಚ್.ಡಿ.ರೇವಣ್ಣ ತಿಳಿಸಿದರು.

ಪಟ್ಟಣದ ಎಪಿಎಂಸಿ ಆವರವಣಲ್ಲಿ ಗುರುವಾರ ಭತ್ತ, ರಾಗಿ ಖರೀದಿ ಕೇಂದ್ರಕ್ಕೆ ಚಾಲನೆ ನೀಡಿ ಮಾತನಾಡಿದರು. ಸರ್ಕಾರ ಕೃಷಿ ಉತ್ಪನ್ನಗಳಿಗೆ ಇಂತಿಷ್ಟು ಬೆಲೆ ಎಂದು ನಿಗದಿ ಮಾಡಿದೆ. ಹಾಗಾಗಿ ಗುಣಮಟ್ಟ ಪರಿಶೀಲನೆ ನಡೆಸಲಾಗುತ್ತದೆ. ಇದರಿಂದ ದಲ್ಲಾಳಿಗಳು, ಮಧ್ಯವರ್ತಿಗಳ ಹಾವಳಿಯಿಂದ ರೈತರು ವಂಚನೆಗೊಳಗಾಗುವುದು ತಪ್ಪುತ್ತದೆ. ಈ ಬಗ್ಗೆ ರೈತರೂ ಸಹ ಎಚ್ಚೆತ್ತುಕೊಳ್ಳಬೇಕು ಎಂದರು.

ಖರೀದಿ ಕೇಂದ್ರದ ಅಧಿಕಾರಿ ಶಮೀದ್‌ಅಲಿ ಮಾತನಾಡಿ, ಫ್ರೂಟ್ ಐಡಿ ಹೊಂದುವುದು ಕಡ್ಡಾಯ. ಜತೆಗೆ ಆಧಾರ್ ಜೋಡಣೆಯಾದ ಬ್ಯಾಂಕ್ ಖಾತೆ ಹೊಂದಿರಬೇಕು. ಮುಖ್ಯವಾಗಿ ಬೆಳೆ ಸಮೀಕ್ಷೆಯಲ್ಲಿ ರಾಗಿ, ಭತ್ತ ಎಂದು ನಮೂದಾಗಿರಬೇಕು. ಸೂಕ್ತ ಮಾಹಿತಿ ಪಡೆದು ಸಂಬಂಧಿಸಿದ ದಾಖಲೆಗಳೊಂದಿಗೆ ರೈತರು ಹೆಸರನ್ನು ನೋಂದಾಯಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಪ್ರತಿ ಕ್ವಿಂಟಾಲ್ ಭತ್ತಕ್ಕೆ 2,500 ರೂ.ನಂತೆ ಉತ್ತಮ ಶ್ರೇಣಿಯ ಭತ್ತವನ್ನು 2320 ರೂ. ದರ ನೀಡಿ ಖರೀದಿಸಲಾಗುತ್ತಿದೆ. ಎಕರೆಗೆ 25 ಕ್ವಿಂಟಾಲ್ನಂತೆ ಗರಿಷ್ಟ 50 ಕ್ವಿಂಟಾಲ್ ಖರೀದಿಸಲಾಗುವುದು. ರಾಗಿ ಪ್ರತಿ ಕ್ವಿಂಟಾಲ್‌ಗೆ 4.920 ರೂ.ನಂತೆ ಗರಿಷ್ಠ 20 ಕ್ವಿಂಟಾಲ್ ಖರೀದಿಸಲಾಗುವುದು. ಭತ್ತ ಮಾರಾಟ ಮಾಡುವ ರೈತರು ಮಾ.31 ರವರೆಗೂ ಹೆಸರನ್ನು ನೊಂದಾಯಿಸಿಕೊಳ್ಳಬಹುದು. ಅಲ್ಲದೆ ಬಯೋಮೆಟ್ರಿಕ್ ಕಡ್ಡಾಯವಾಗಿರುತ್ತದೆ ಎಂದು ತಿಳಿಸಿದರು.

ತಹಸೀಲ್ದಾರ್ ರೇಣುಕುಮಾರ್, ಪುರಸಭಾ ಮಾಜಿ ಅಧ್ಯಕ್ಷ ಕೆ.ಶ್ರೀಧರ್, ಉದ್ಯಮಿ ಟಿ.ಶಿವಕುಮಾರ್, ಆಹಾರ ನಿರೀಕ್ಷಕ ವಾಸು, ರಾಜಸ್ವ ನಿರೀಕ್ಷಕ ಹರೀಶ್ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net