ಪ್ರಸವಪೂರ್ವದಲ್ಲಿ ಗುಣಮಟ್ಟದ ಆರೈಕೆ ನಮ್ಮ ಗುರಿ

IMG-20251024-WA0004
Published on

ಎಚ್.ಡಿ.ಕೋಟೆ: ಮಹಿಳೆಯರಿಗೆ ಗರ್ಭಧಾರಣೆಯ ಎರಡನೇ ಅಥವಾ ಮೂರನೇ ತ್ರೈಮಾಸಿಕದಲ್ಲಿ ಪ್ರಸವಪೂರ್ವ ಗುಣಮಟ್ಟದ ಆರೈಕೆಯನ್ನು ಒದಗಿಸುವ ಗುರಿಯನ್ನು ಆರೋಗ್ಯ ಇಲಾಖೆ ಹೊಂದಿದೆ ಎಂದು ತಾಲೂಕು ಆರೋಗ್ಯ ವೈದ್ಯಾಧಿಕಾರಿ ಡಾ.ಟಿ.ರವಿಕುಮಾರ್ ತಿಳಿಸಿದರು.

ತಾಲೂಕಿನ ಮಾದಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ತಾಲೂಕು ಆರೋಗ್ಯ ಇಲಾಖೆ ವತಿಯಿಂದ ಶುಕ್ರವಾರ ಹಮ್ಮಿಕೊಂಡಿದ್ದ ಪ್ರಧಾನ ಮಂತ್ರಿ ಮಾತೃತ್ವ ಸುರಕ್ಷತಾ ಅಭಿಯಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಪ್ರಧಾನ ಮಂತ್ರಿ ಸುರಕ್ಷಿತ್ ಮಾತೃತ್ವ ಅಭಿಯಾನ ಇಲಾಖೆಯ ಕಾರ್ಯಕ್ರಮವಾಗಿದ್ದು, ಪ್ರತಿ ತಿಂಗಳ 9 ನೇ ಮತ್ತು 24 ನೇ ತಾರೀಖಿನಂದು ಎಲ್ಲ ಗರ್ಭಿಣಿಯರಿಗೆ ತಪಾಸಣೆ, ಐಎಫ್‌ಎ ಮತ್ತು ಕ್ಯಾಲ್ಸಿಯಂ ಪೂರಕಗಳು ಮತ್ತು ತಾಯಿ-ಮಕ್ಕಳ ರಕ್ಷಣಾ ಕಾರ್ಡ್‌ಗಳನ್ನು ಒದಗಿಸಲಾಗುತ್ತದೆ ಎಂದರು.

ಪ್ರಧಾನ ಮಂತ್ರಿ ಸುರಕ್ಷಿತ ಮಾತೃತ್ವ ಅಭಿಯಾನವು ಸಂತಾನೋತ್ಪತ್ತಿ ತಾಯಿಯ ನವಜಾತ ಶಿಶು ಮತ್ತು ಹದಿಹರೆಯದ ಆರೋಗ್ಯ ಕಾರ್ಯತಂತ್ರದ ಭಾಗವಾಗಿ ರೋಗನಿರ್ಣಯ ಮತ್ತು ಸಮಾಲೋಚನೆ ಸೇವೆಗಳನ್ನು ಒಳಗೊಂಡಂತೆ ಪ್ರಸವಪೂರ್ವ ಆರೈಕೆಯ ಗುಣಮಟ್ಟ ಮತ್ತು ವ್ಯಾಪ್ತಿಯನ್ನು ಸುಧಾರಿಸಲು ಉದ್ದೇಶಿಸಿದೆ ಎಂದು ತಿಳಿಸಿದರು.

ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಾದ ಡಾ.ಚಂದ್ರಕಲಾ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಶರಣಪ್ಪ ರಾಮಾಣಿ, ಸಿಬ್ಬಂದಿ ಮಾಚಿ ಶೀಲಾ, ಜಯಂತಿ, ಆಶಾ ಕಾರ್ಯಕರ್ತೆಯರು, ಗರ್ಭಿಣಿಯರು, ಇನ್ನಿತರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net