

ನೆಲಮಂಗಲ : ನಗರದ ಸೊಂಡೆಕೊಪ್ಪ ವೃತ್ತದಿಂದ ತಾಲೂಕಿನ ಗಡಿವರೆಗೂ ಸಾರ್ವಜನಿಕರಿಗೆ ಹಾಗೂ ವಾಹನ ಸವಾರರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಗುಣಮಟ್ಟದ ರಸ್ತೆ ಕಾಮಗಾರಿ ಮಾಡಲಾಗುತ್ತಿದೆ ಎಂದು ಶಾಸಕ ಎನ್.ಶ್ರೀನಿವಾಸ್ ತಿಳಿಸಿದರು.
ಸೋಮವಾರದಂದು ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಮತ್ತು ಮುಖಂಡರೊಂದಿಗೆ ನಗರಸಭಾ ವ್ಯಾಪ್ತಿಯ ಸೊಂಡೆಕೊಪ್ಪ ವೃತ್ತದಿಂದ ತಾಲೂಕು ಗಡಿವರೆಗೂ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯ ಕಾಮಗಾರಿ ಪರಿಶೀಲನೆ ನಡೆಸಿ ಮಾತನಾಡಿದರು. ರಾಜ್ಯರಾಜಧಾನಿ ಬೆಂಗಳೂರು ನಗರಕ್ಕೆ ಹೊಂದಿಕೊಂಡಿರುವ ನೆಲಮಂಗಲ ವಿಧಾನಸಭಾ ೇತ್ರವನ್ನು ಹಂತ ಹಂತವಾಗಿ ಅಭಿವೃದ್ಧಿ ಮಾಡಲಾಗುತ್ತಿದೆ. ಈ ನಿಟ್ಟಿನಲ್ಲಿ ಸುಮಾರು 17 ಕೋಟಿ ರೂ.ವೆಚ್ಚದಲ್ಲಿ ನಗರದ ಸೊಂಡೇಕೊಪ್ಪ ವೃತ್ತದಿಂದ ತಾಲೂಕಿನ ಗಡಿವರೆಗೂ ಸಂಪರ್ಕ ಕಲ್ಪಿಸುವ ರಸ್ತೆಯನ್ನು ಚತುಷ್ಪಥವಾಗಿ ಮೇಲ್ದರ್ಜೆಗೇರಿಸಿ ಅಭಿವೃದ್ಧಿ ಮಾಡಲಾಗುತ್ತಿದೆ. ರಸ್ತೆ ಕಾಮಗಾರಿ ಶ್ರೀ ಪೂರ್ಣಗೊಳಿಸಿ ಸಾರ್ವಜನಿಕರಿಗೆ ಹಾಗೂ ವಾಹನವಾರರಿಗೆ ಅನುಕೂಲ ಮಾಡಿಕೊಡಲಾಗುವುದು. ಹಾಗಾಗಿ ಕಾಮಗಾರಿ ನಡೆಯುವ ವೇಳೆ ಸಾರ್ವಜನಿಕರು ಹಾಗೂ ವಾಹನ ಸವಾರರು ಸಹಕಾರ ನೀಡಬೇಕು ಎಂದರು.
ಅಧಿಕಾರಿಗಳಿಂದ ಮಾಹಿತಿ: ನಗರದಿಂದ ಸೊಂಡೆಕೊಪ್ಪ ಮುಖ್ಯರಸ್ತೆ ಕಾಮಗಾರಿ ನಡೆಯುತ್ತಿರುವ ಸ್ಥಳಕ್ಕೆ ಕೆಲ ಜನಪ್ರತಿನಿಧಿಗಳು ಹಾಗೂ ಮುಖಂಡರೊಂದಿಗೆ ಭೇಟಿ ನೀಡಿದ ಶಾಸಕರು ಮೊದಲಿಗೆ ಕಾಮಗಾರಿ ಕುರಿತು ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.
ಗುಣಮಟ್ಟ ಕಾಪಾಡಿ: ಈ ಭಾಗದ ಜನರ ಬಹುದಿನ ಬೇಡಿಕೆಯಾಗಿದ್ದ ಮುಖ್ಯರಸ್ತೆಯನ್ನು 17 ಕೋಟಿ ರೂ.ವೆಚ್ಚದಲ್ಲಿ ರಸ್ತೆ ಕಾಮಗಾರಿ ನಡೆಯುತ್ತಿದ್ದು, ಕಾಮಗಾರಿಯಲ್ಲಿ ಗುಣಮಟ್ಟ ಕಾಯ್ದುಕೊಳ್ಳಬೇಕು. ಜತೆಗೆ ಅಧಿಕಾರಿಗಳು ಸ್ಥಳಿಯ ಮುಖಂಡರನ್ನು ವಿಶ್ವಾಸಕ್ಕೆ ತಗೆದುಕೊಂಡು ಗುಣಮಟ್ಟದ ರಸ್ತೆಯನ್ನು ನಿರ್ಮಾಣ ಮಾಡಬೇಕು ಎಂದು ಶಾಸಕ ಎನ್.ಶ್ರೀನಿವಾಸ್ ತಿಳಿಸಿದರು.
ನಗರಸಭೆ ಉಪಾಧ್ಯಕ್ಷ ಆನಂದ್, ಸದಸ್ಯ ಪ್ರದಿಪ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಟಿ.ನಾಗರಾಜು, ಬಿಎಂಟಿಸಿ ಮಾಜಿ ನಿರ್ದೇಶಕ ಮಿಲ್ಟ್ರಿಮೂರ್ತಿ, ಲೋಕೋಪಯೋಗಿ ಇಲಾಖೆ ಎಇಇ ಸೋಮಶೇಖರ್, ಮುಖಂಡ ಸಿ.ಎಂ.ಗೌಡ, ಕೆ.ಕೃಷ್ಣಪ್ಪ, ನರಸಿಂಹಮೂರ್ತಿ, ರವಿಕುಮಾರ್, ಚಂದ್ರಕುಮಾರ್, ಮುನಿರಾಜು ಇತರರು ಇದ್ದರು.