ಗುಣಮಟ್ಟದ ಚಿಕಿತ್ಸೆ ನೀಡುವಂತೆ ಸೂಚನೆ

6 GVT 01
ಗಂಗಾವತಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಢಣಾಪುರದ ಪ್ರಕಾಶ ಶ್ರೇಷ್ಠಿ ಯೋಗ ಕ್ಷೇಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಭಾನುವಾರ ವಿಚಾರಿಸಿದರು. ಗ್ರೇಡ್ 2 ತಹಸೀಲ್ದಾರ್ ಮಹಾಂತಗೌಡ ಗೌಡರ್, ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ರೆಡ್ಡಿ ಶ್ರೀನಿವಾಸ, ಪಿಎಸ್ಸೆಸ್ಸೆನ್ ನಿರ್ದೇಶಕ ವಿಶ್ವನಾಥ ಮಾಲಿ ಪಾಟೀಲ್ ಇತರರಿದ್ದರು.
Published on

ಗಂಗಾವತಿ: ತಾಲೂಕಿನ ಢಣಾಪುರ ಮನೆ ಛಾವಣಿ ಕುಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗಾಯಾಳು ಪ್ರಕಾಶ ಶ್ರೇಷ್ಠಿ ವೈದ್ಯಕೀಯ ವೆಚ್ಚ ಸರ್ಕಾರ ಭರಿಸಲಿದ್ದು, ಮನೆ ನಿರ್ಮಿಸಿಕೊಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಹೇಳಿದರು.

ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಢಣಾಪುರದ ಪ್ರಕಾಶ ಶ್ರೇಷ್ಠಿ ಯೋಗ ಕ್ಷೇಮ ಭಾನುವಾರ ವಿಚಾರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

ಕಾಲು ಮತ್ತು ಬೆನ್ನು ಹುರಿ ಶಸ ಚಿಕಿತ್ಸೆಯ ಅಗತ್ಯವಿದ್ದು, ಗುಣಮಟ್ಟದ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಸೂಚಿಸಲಾಗಿದೆ. ಪರಿಹಾರದ ಜತೆಗೆ ಚಿಕಿತ್ಸೆ ಸೌಲಭ್ಯ ಒದಗಿಸಲಾಗುವುದು. ಜಿಲ್ಲಾಡಳಿತದೊಂದಿಗೆ ಚರ್ಚಿಸಿದ್ದು, ಮನೆ ನಿರ್ಮಿಸಿಕೊಡಲಾಗುವುದು. ಜನರ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸಿದ್ದು, ಕಾರ್ಯಕರ್ತರ ಮೂಲಕ ಸೂಕ್ತ ವ್ಯವಸ್ಥೆ ಮಾಡಲಾಗಿದೆ.

ನಗರದಲ್ಲಿ ಝೀರೋ ಟ್ರಾಫಿಕ್ ಇದ್ದಾಗ ಶಾಸಕ ಗಾಲಿ ಜನಾರ್ದನರೆಡ್ಡಿ ಅಡ್ಡದಾರಿಯಲ್ಲಿ ವಾಹನ ಚಲಾಯಿಸಿಕೊಂಡು ಹೋಗಿದ್ದು ಸರಿಯಲ್ಲ. ಸಿಎಂ ಸಂವಿಧಾನಿಕ ಹುದ್ದೆಯಾಗಿದ್ದು, ಹುದ್ದೆಗಾದರೂ ಗೌರವ ನೀಡಬೇಕು. ಈ ಬಗ್ಗೆ ಪರಿಶೀಲಿಸಿ, ಕ್ರಮಕೈಗೊಳ್ಳುವಂತೆ ಡಿವೈಎಸ್ಪಿಗೆ ಸೂಚಿಸಿದ್ದೇನೆ. ಶಾಸಕ ಸ್ಥಾನದಲ್ಲಿರುವ ವ್ಯಕ್ತಿಗಳು ಪ್ರೋಟೋಕಾಲ್ ವಿಚಾರದಲ್ಲಿ ಯಾವ ರೀತಿ ನಡೆದುಕೊಳ್ಳಬೇಕೆಂಬುದನ್ನು ಅರಿಯಬೇಕು. ಅಂತಹ ಸಂದರ್ಭದಲ್ಲಿ ಏನಾದರೂ ಅವಘಡ ಸಂಭವಿಸಿದ್ದರೆ ಯಾರೂ ಹೊಣೆಗಾರರು ಎಂದರು.

ಗ್ರೇಡ್- 2 ತಹಸೀಲ್ದಾರ್ ಮಹಾಂತಗೌಡ ಗೌಡರ್, ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ರೆಡ್ಡಿ ಶ್ರೀನಿವಾಸ, ಪಿಎಸ್ಸೆಸ್ಸೆನ್ ನಿರ್ದೇಶಕ ವಿಶ್ವನಾಥ ಮಾಲಿ ಪಾಟೀಲ್, ಮುಖಂಡರಾದ ಕೀರಪ್ಪ, ಶಶಿಧರಗೌಡ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net