ಗುಣಮಟ್ಟದ ಕಾಮಗಾರಿ ಕೈಗೊಳ್ಳಲಿ

oplus_2
oplus_2
Published on

ರಾಮದುರ್ಗ: ಪಶುಗಳ ಚಿಕಿತ್ಸೆಗೆ ಅನುಕೂಲವಾಗಲು ಕಟಕೋಳ ಹಾಗೂ ಹೊಸಕೋಟಿ ಆಸ್ಪತ್ರೆಗಳ ನಿರ್ಮಾಣಕ್ಕೆ ಕ್ರಮ ತೆಗೆದುಕೊಂಡಿದ್ದು, ಗುತ್ತಿಗೆದಾರರು ಗುಣಮಟ್ಟದ ಕಾಮಗಾರಿ ಕೈಗೊಳ್ಳಬೇಕು ಎಂದು ವಿಧಾನಸಭೆ ಮುಖ್ಯ ಸಚೇತಕ ಅಶೋಕ ಪಟ್ಟಣ ಹೇಳಿದರು.

ತಾಲೂಕಿನ ಕಟಕೋಳ ಹಾಗೂ ಹೊಸಕೋಟಿ ಗ್ರಾಮಗಳಲ್ಲಿ ಸೋಮವಾರ 1 ಕೋಟಿ ರೂ. ವೆಚ್ಚದಲ್ಲಿ 2 ಕಡೆ ಪತ್ಯೇಕ ಪಶು ಆಸ್ಪತ್ರೆ ಕಟ್ಟಡ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು.

ಪಶು ಆಸ್ಪತ್ರೆ ತಾಲೂಕು ವೈದ್ಯಾಧಿಕಾರಿ ಗಿರೀಶ ಪಾಟೀಲ ಮಾತನಾಡಿ, ತಾಲೂಕಿನ ವಿವಿಧ ಆಸ್ಪತ್ರೆಗಳಲ್ಲಿ ಸಿಬ್ಬಂದಿ ಹಾಗೂ ಪಶುವೈದ್ಯರ ಕೊರತೆಯಿದ್ದರೂ ರೈತರಿಗೆ ಸಹಕಾರ ನೀಡುತ್ತಿದ್ದೇವೆ. ಶಾಸಕರು ಸಿಬ್ಬಂದಿ ಹಾಗೂ ವೈದ್ಯರ ನೇಮಕಕ್ಕೆ ಕಾಳಜಿ ವಹಿಸಬೇಕು ಎಂದು ಮನವಿ ಮಾಡಿದರು.

ಕಟಕೋಳ ಗ್ರಾಮದ ಮುಖಂಡ ಎನ್​.ಬಿ.ದಂಡಿನದುರ್ಗಿ, ನಿಂಗರಾಜ ದೇಸಾಯಿ, ಹೊಸಕೋಟಿ ಗ್ರಾಮದ ಮುಖಂಡ ಶಿವನಗೌಡ ಪಾಟೀಲ, ವಿವಿಧ ಇಲಾಖೆಯ ಅಧಿಕಾರಿಗಳು, ಗ್ರಾಪಂ ಸದಸ್ಯರು ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net