ಬಿಜೆಪಿ ಟಿಕೆಟ್​ಗಾಗಿ ರಾಜ್ಯಾಧ್ಯಕ್ಷರ ಸಮ್ಮುಖದಲ್ಲೇ ಗಲಾಟೆ; ಆಕಾಂಕ್ಷಿಗಳ ಬೆಂಬಲಿಗರಿಂದ ಮಾತಿನ ಚಕಮಕಿ..

BJP
Published on

ವಿಜಯಪುರ: ರಾಜ್ಯ ವಿಧಾನಸಭೆ ಚುನಾವಣೆಗೆ ಮುನ್ನವೇ ಬಿಜೆಪಿ ಟಿಕೆಟ್​ಗಾಗಿ ಆಕಾಂಕ್ಷಿಗಳ ಮಧ್ಯೆ ಭಾರಿ ಪೈಪೋಟಿ ಉಂಟಾಗಿದ್ದು, ರಾಜ್ಯಾಧ್ಯಕ್ಷರ ಸಮ್ಮುಖದಲ್ಲೇ ಗದ್ದಲ-ಗಲಾಟೆ ಶುರುವಾಗಿದೆ‌. ಬಸವನಬಾಗೇವಾಡಿ ವಿಧಾನಸಭೆ ಕ್ಷೇತ್ರದ ಬಿಜೆಪಿ ಟಿಕೆಟ್​ಗಾಗಿ ಆಕಾಂಕ್ಷಿಗಳ ಬೆಂಬಲಿಗರು ಪಕ್ಷದ ರಾಜ್ಯಾಧ್ಯಕ್ಷ ರ ಸಮ್ಮುಖದಲ್ಲೇ ಪರಸ್ಪರ ಮಾತಿನ ಚಕಮಕಿ ನಡೆಸಿದರು.

ಮಂಗಳವಾರ ಬಸವನವಾಗೇವಾಡಿಯ ತಾಳಿಕೋಟೆ ರಸ್ತೆಯಲ್ಲಿರುವ ಸಭಾಭವನದಲ್ಲಿ ಪಕ್ಷದ ಕಾರ್ಯಕರ್ತರ ಸಮಾವೇಶದಲ್ಲಿ ಮಾಜಿ ಸಚಿವ ಎಸ್.ಕೆ. ಬೆಳ್ಳುಬ್ಬಿ ಹಾಗೂ ಮುಖಂಡ ಅಪ್ಪುಗೌಡ ಪಾಟೀಲ ಮನಗೂಳಿ ಬೆಂಬಲಿಗರ ಮಧ್ಯೆ ಮಾತಿನ ಚಕಮಕಿ ನಡೆದಿದ್ದರಿಂದ ಕೆಲಕಾಲ ಗೊಂದಲ ಉಂಟಾಯಿತಲ್ಲದೆ ಕಾರ್ಯಕ್ರಮಕ್ಕೆ ತಾತ್ಕಾಲಿಕ ಬ್ರೇಕ್ ಬಿದ್ದಿತು.

ಘಟನೆಗೆ ಮಾಜಿ ಸಚಿವ ಎಸ್.ಕೆ. ಬೆಳ್ಳುಬ್ಬಿ ಅವರ ಭಾಷಣವೇ ಕಾರಣ. ಎಸ್.ಕೆ.ಬೆಳ್ಳುಬ್ಬಿ ಅವರು ಭಾಷಣ ಮಧ್ಯೆ, ಬರುವ ಚುನಾವಣೆಯಲ್ಲಿ ಪಕ್ಷದ ಕಾರ್ಯಕರ್ತರ ಅಭಿಪ್ರಾಯ ಪಡೆದು ಟಿಕೆಟ್ ನೀಡಬೇಕು. ನಿನ್ನೆ ಮೊನ್ನೆ ಬಂದವರಿಗೆ ಟಿಕೆಟ್ ನೀಡಬಾರದು ಎಂದಿದ್ದರಿಂದ ಅಪ್ಪುಗೌಡ ಪಾಟೀಲ ಮನಗೂಳಿ ಬೆಂಬಲಿಗರು ಗಲಾಟೆ ಆರಂಭಿಸಿದರು.

ಮಧ್ಯ ಪ್ರವೇಶಿಸಿದ ಬಿಜೆಪಿ ರಾಜ್ಯಾಧ್ಯಕ್ಷರು, ಬೆಂಬಲಿಗರನ್ನು ಕರೆತಂದು ಗಲಾಟೆ ಮಾಡಿಸುವುದು ಸರಿಯಲ್ಲ. ಪಕ್ಷ ಯಾರಿಗೆ ಟಿಕೆಟ್ ನೀಡಬೇಕೆಂದು ನಿರ್ಧರಿಸುತ್ತದೆ. ಗಲಾಟೆ ಮಾಡಿದರೆ ಶಿಸ್ತು ಕ್ರಮ ಕೈಗೊಳ್ಳಲಿದೆ ಎಂದು ಎಚ್ಚರಿಸಿದರು. ಬಳಿಕ ಕಾರ್ಯಕರ್ತರು ಸುಮ್ಮನಾದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net