ಬೆಳ್ತಂಗಡಿ ಬಿ ಒಕ್ಕೂಟದ ತ್ರೈಮಾಸಿಕ ಸಭೆ

meeting
ಬೆಳ್ತಂಗಡಿ ಬಿ ಒಕ್ಕೂಟದ ತ್ರೈಮಾಸಿಕ ಸಭೆ ಒಕ್ಕೂಟ ಅಧ್ಯಕ್ಷ ಚರಣ್ ಕುಮಾರ್ ಅಧ್ಯಕ್ಷತೆಯಲ್ಲಿ ನಡೆಯಿತು. ಯೋಜನೆ ಜಿಲ್ಲಾ ನಿರ್ದೇಶಕ ಮಹಾಬಲ ಕುಲಾಲ್, ವಲಯ ಮೇಲ್ವಿಚಾರಕರಾದ ಹರೀಶ್, ಮಾಜಿ ಒಕ್ಕೂಟದ ಅಧ್ಯಕ್ಷರು, ಒಕ್ಕೂಟದ ಪದಾಧಿಕಾರಿಗಳು ಮೊದಲಾದವರಿದ್ದರು.
Published on

ಬೆಳ್ತಂಗಡಿ: ಶ್ರೀ ಕ್ಷೇತ್ರ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್, ಬೆಳ್ತಂಗಡಿ ತಾಲೂಕಿನ ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಬೆಳ್ತಂಗಡಿ ಬಿ ಒಕ್ಕೂಟದ ತ್ರೈಮಾಸಿಕ ಸಭೆ ಜೆ.ಸಿ ಭವನ ಬೆಳ್ತಂಗಡಿಯಲ್ಲಿ ನಡೆಯಿತು.

ಒಕ್ಕೂಟದ ನೂತನ ಅಧ್ಯಕ್ಷರಾದ ತ್ರೇಸ್ಯಾ ಎಂ.ವಿ. ಒಕ್ಕೂಟ ಸಭೆ ಉದ್ಘಾಟಿಸಿದರು. ಒಕ್ಕೂಟ ಅಧ್ಯಕ್ಷ ಚರಣ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ತ್ರೈಮಾಸಿಕ ಸಭೆಯ ಜವಾಬ್ದಾರಿ ಭಾಗ್ಯಶ್ರೀ ಸಂಘದ ಸದಸ್ಯರು ವಹಿಸಿಕೊಂಡಿದ್ದು, ಸಂಘದ ಸಾಧನೆಯ ವರದಿ ಜಯಶ್ರೀ ಮಂಡಿಸಿದರು. ಒಕ್ಕೂಟದ ಸಭೆ ವರದಿ ಸುಮಂತ್ ಮಂಡಿಸಿದರು. ಯೋಜನೆ ಜಿಲ್ಲಾ ನಿರ್ದೇಶಕ ಮಹಾಬಲ ಕುಲಾಲ್ ಯೋಜನೆ ಕಾರ್ಯಕ್ರಮ ಬಗ್ಗೆ ಮಾಹಿತಿ ನೀಡಿದರು.

ವಲಯ ಮೇಲ್ವಿಚಾರಕರಾದ ಹರೀಶ್ ಹಾಗೂ ಮಾಜಿ ಒಕ್ಕೂಟದ ಅಧ್ಯಕ್ಷರು, ಒಕ್ಕೂಟದ ಪದಾಧಿಕಾರಿಗಳು, ದಾಖಲಾತಿ ಸಮಿತಿಯ ಸದಸ್ಯರು, ಎಲ್ಲ ಸಂಘದ ಸದಸ್ಯರು, ಸೇವಾಪ್ರತಿನಿಧಿ ಸೌಮ್ಯಾ ಉಪಸ್ಥಿತರಿದ್ದರು. ಸುಮಂತ್ ಸ್ವಾಗತಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net