ತ್ರೈಮಾಸಿಕ ಕಾರ್ಯನಿರ್ವಹಣೆ ಕಾಮಗಾರಿ: ನ.10ರಂದು ಮೂರು ತಾಲೂಕಿನಲ್ಲಿ ಕರೆಂಟ್ ಇರಲ್ಲ

Power Cut
Published on

ಮಂಡ್ಯ: ತ್ರೈಮಾಸಿಕ ಕಾರ್ಯ ನಿರ್ವಹಣೆ ಹಮ್ಮಿಕೊಂಡಿರುವುದರಿಂದ ನ.10ರಂದು ಹಲವೆಡೆ ವಿದ್ಯುತ್‌ನಲ್ಲಿ ವ್ಯತ್ಯಯ ಉಂಟಾಗಲಿದೆ.

ಕೋಲಕಾರನದೊಡ್ಡಿ ವಿದ್ಯುತ್ ವಿತರಣಾ ಕೇಂದ್ರ ವ್ಯಾಪ್ತಿಯ ತಗ್ಗಹಳ್ಳಿ, ಕೋಲಕಾರನದೊಡ್ಡಿ, ಹೆಮ್ಮಿಗೆ, ಸೂನಗನಹಳ್ಳಿ, ಪುರ, ಲೋಕಸರ, ಹಳುವಾಡಿ, ಕಮ್ನಾಯಕನಹಳ್ಳಿ, ಟಿ.ಮಲ್ಲಿಗೆರೆ, ಕಬ್ಬನಹಳ್ಳಿ, ತಿಮ್ಮನಹೊಸೂರು, ಬಿ.ಹೊಸೂರು, ಗೋಪನಹಳ್ಳಿ, ಯಡಗನಹಳ್ಳಿ, ಮಾದರಹಳ್ಳಿ ಮತ್ತು ತೂಬಿನಕೆರೆ ವಿದ್ಯುತ್ ವಿತರಣಾ ಕೇಂದ್ರ ವ್ಯಾಪ್ತಿಯ ತೂಬಿನಕೆರೆ, ತೂಬಿನಕೆರೆ ಕೈಗಾರಿಕಾ ಪ್ರದೇಶ, ಉರಮಾರಕಸಲಗೆರೆ, ಯಲಿಯೂರು, ಕಾಳೇನಹಳ್ಳಿ, ಎಲೆಚಾಕನಹಳ್ಳಿ, ರಾಗಿಮುದ್ದನಹಳ್ಳಿ, ಸುಂಡಹಳಿ, ಪೀಹಳ್ಳಿ, ಕೊಡಿಯಾಲ ಆಲಗೂಡು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬೆಳಗ್ಗೆ 9 ಗಂಟೆಯಿಂದ ಸಂಜೆ 6 ರವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ಸೆಸ್ಕ್ ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net