ನಿವೇಶನ ರಹಿತರಿಗೆ ಶೀಘ್ರ ನಿವೇಶನ ಹಂಚಿಕೆ

16 nrp 1...
ಎನ್.ಆರ್.ಪುರದ ಆಡುವಳ್ಳಿ ಗ್ರಾಪಂ ವ್ಯಾಪ್ತಿಯ ವಿವಿಧ ಗ್ರಾಮಗಳ ವ್ಯಾಪ್ತಿಯಲ್ಲಿ ಜಲಜೀವನ್ ಮಿಷನ್ ಯೋಜನೆಯಡಿ ಕುಡಿಯುವ ನೀರಿನ ಕಾಮಗಾರಿಗಳಿಗೆ ಶಾಸಕ ಟಿ.ಡಿ.ರಾಜೇಗೌಡ ಚಾಲನೆ ನೀಡಿದರು. ಗೇರ್‌ಬೈಲ್‌ನಟರಾಜ್, ಚೆನ್ನಪ್ಪಗೌಡ, ರಾಜೇಶ್, ವಿಜಯ,ಬಿ.ವಿ.ಉಪೇಂದ್ರ,ಸಾವಿತ್ರಮ್ಮ, ಜಿ.ಎಸ್.ಪ್ರವೀಣ್ ಇದ್ದರು.
Published on

ಎನ್.ಆರ್.ಪುರ: ಜಲಜೀವನ್ ಮಿಷನ್ ಯೋಜನೆಯಡಿ ಆಡುವಳ್ಳಿ ಗ್ರಾಪಂ ವ್ಯಾಪ್ತಿಯ ಹಲವು ಗ್ರಾಮಗಳಿಗೆ ಕುಡಿಯುವ ನೀರು ಪೂರೈಸುವ 7.50 ಕೋಟಿ ರೂ ಕಾಮಗಾರಿಗೆ ಚಾಲನೆ ನೀಡಲಾಗಿದೆ ಎಂದು ಶಾಸಕ ಟಿ.ಡಿ.ರಾಜೇಗೌಡ ಹೇಳಿದರು.
ಆಡುವಳ್ಳಿ ಗ್ರಾಪಂ ವ್ಯಾಪ್ತಿಯಲ್ಲಿ ಹಲವು ಗ್ರಾಮಗಳ ವ್ಯಾಪ್ತಿಯಲ್ಲಿ ಜಲಜೀವನ್ ಮಿಷನ್ ಯೋಜನೆಯಡಿ ಕುಡಿಯುವ ನೀರಿನ ಕಾಮಗಾರಿಗೆ ಚಾಲನೆ ನೀಡಿ, ಮಾತನಾಡಿ, ಹಿಂದೆ ಡಿ.ಬಿ.ಚಂದ್ರೇಗೌಡರು ಸಚಿವರಾದಾಗ ಗ್ರಾಪಂ ವ್ಯಾಪ್ತಿಯ ಕೊಳವೆ, ಆಡುವಳ್ಳಿ ಸಂಪರ್ಕ ರಸ್ತೆ ಅಭಿವದ್ಧಿ ಪಡಿಸಲಾಗಿತ್ತು ಎಂದರು.
ಆಡುವಳ್ಳಿ ಗ್ರಾಪಂ ಚಾಯಿತಿ ವ್ಯಾಪ್ತಿಯ ನಿವೇಶನ ರಹಿತರಿಗೆ ನಿವೇಶನ ನೀಡಲು ಹಿಂದೆಯೇ 5 ಎಕರೆ ಜಾಗ ಮಂಜೂರಾಗಿತ್ತು. ಇದನ್ನು ಹಂಚಿಕೆ ಮಾಡಲು ಬಿಟ್ಟಿರಲಿಲ್ಲ. ಶೀಘ್ರದಲ್ಲೇ ನಿವೇಶನ ಹಂಚಿಕೆ ಮಾಡಲಾಗುವುದು. ಹಿಂದೆ ಚಿಕ್ಕಮಗಳೂರಿನ ಜಿಲ್ಲಾಧಿಕಾರಿಯೊಬ್ಬರು 1.25 ಲಕ್ಷ ಹೆಕ್ಟೆರ್ ಪ್ರದೇಶವನ್ನು ಡೀಮ್ಡಾರೆಸ್ಟ್‌ಗೆ ಸೇರಿಸಿದ್ದಾರೆ. ಇದರಲ್ಲಿ ಬಹುತೇಕ ಜನವಸತಿ ಪ್ರದೇಶ ಹಾಗೂ ಕೃಷಿ ಸಾಗುವಳಿ ಜಮೀನು ಸೇರಿದ್ದು ಇದರಲ್ಲಿ 25 ಸಾವಿರ ಹೆಕ್ಟೇರ್ ಪ್ರದೇಶ ಡಿಮ್ಡ್ ಾರೆಸ್ಟ್ ನಿಂದ ಬಿಡುಗಡೆಗೊಳಿಸಲು ಸರ್ಕಾರ ನಿರ್ಧರಿಸಿದೆ. ಇದು ಬಿಡುಗಡೆಯಾದರೆ ಬಹುತೇಕ ಜನರಿಗೆ ಅನುಕೂಲವಾಗಲಿದೆ.
ಈ ಭಾಗದ ಅರಣ್ಯ ಮತ್ತು ಕಂದಾಯ ಜಮೀನಿನ ಸಮಸ್ಯೆ ಬಗ್ಗೆ ಅರಣ್ಯ ಸಚಿವರ ಗಮನಸೆಳೆಯುವ ಕೆಲಸ ಮಾಡಲಾಗಿದೆ. ಒತ್ತುವರಿದಾರರಿಗೆ ಭವಿಷ್ಯದಲ್ಲಿ ಯಾವುದೇ ಸಮಸ್ಯೆಯಾಗದ ರೀತಿ ಕಾನೂನು ಪ್ರಕಾರವಾಗಿ ಹಕ್ಕುಪತ್ರ ನೀಡಲಾಗುವುದು. ಮುಂಬರುವ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಹಾಗೂ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಕಾರ್ಯಕರ್ತರು ಶ್ರಮಿಸಬೇಕು. ಅಧಿಕಾರದಲ್ಲಿರುವವರೆಗೂ ಕ್ಷೇತ್ರದ ಅಭಿವೃದ್ಧಿ ಹಾಗೂ ಜನರ ಸೇವೆಗೆ ಪ್ರಾಮಾಣಿಕವಾಗಿ, ಶಕ್ತಿ ಮೀರಿ ಶ್ರಮಿಸಲಾಗುವುದು ಎಂದರು.
ಆಡುವಳ್ಳಿ ಗ್ರಾಪಂ ಸದಸ್ಯರಾದ ಗೇರುಬೈಲ್‌ನಟರಾಜ್, ಚೆನ್ನಪ್ಪಗೌಡ, ಕರ್ಕೇಶ್ವರ ಗ್ರಾಪಂ ಸದಸ್ಯ ರಾಜೇಶ್, ವಿಜಯ, ಪಿಕಾರ್ಡ್ ಬ್ಯಾಂಕ್ ಮಾಜಿ ಅಧ್ಯಕ್ಷ ಬಿ.ವಿ.ಉಪೇಂದ್ರ, ಗ್ರಾಪಂ ಮಾಜಿ ಸದಸ್ಯೆ ಸಾವಿತ್ರಮ್ಮ, ತಾಪಂ ಮಾಜಿ ಸದಸ್ಯ ಪ್ರವೀಣ್ ಕುಮಾರ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net