ಶೀಘ್ರ ಬ್ಯಾಕ್‌ಲಾಗ್ ಹುದ್ದೆ ಭರ್ತಿ: ಸಚಿವ ಮಧು ಬಂಗಾರಪ್ಪ

minister madhu bangarappa
ಶಿಕ್ಷಣ ಸಚಿವ ಮಧು ಬಂಗಾರಪ್ಪ
Published on

ಶಿವಮೊಗ್ಗ: ಬಜೆಟ್ ಅಧಿವೇಶನದೊಳಗೆ 2-3 ಸಾವಿರ ಸಂಗೀತ ಶಿಕ್ಷಕರು, ದೈಹಿಕ ಶಿಕ್ಷಣ ಶಿಕ್ಷಕರ ನೇಮಕಾತಿ ಸೇರಿದಂತೆ ಎರಡ್ಮೂರು ದಶಕಗಳಿಂದ ಬಾಕಿ ಉಳಿದಿರುವ ಬ್ಯಾಕ್‌ಲಾಗ್ ಹುದ್ದೆಗಳನ್ನೂ ಭರ್ತಿ ಮಾಡಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.

ಮುಂದಿನ ಐದು ವರ್ಷಗಳಲ್ಲಿ 3 ಸಾವಿರ ಕೆಪಿಎಸ್(ಕರ್ನಾಟಕ ಪಬ್ಲಿಕ್ ಸ್ಕೂಲ್)ಗಳನ್ನು ತೆರೆಯುವುದಾಗಿ ಈಗಾಗಲೇ ಹೇಳಿದ್ದೇನೆ. ಮುಂದಿನ ಒಂದು ವರ್ಷದೊಳಗೆ 500ರಿಂದ 600 ಕೆಪಿಎಸ್ ಆರಂಭಿಸಲಾಗುವುದು. ಕೆಪಿಎಸ್‌ಗೆ ಶಿವಮೊಗ್ಗ ಜಿಲ್ಲೆಯನ್ನೇ ಮಾದರಿಯಾಗಿಟ್ಟುಕೊಳ್ಳಲಾಗುವುದು ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ರಾಜ್ಯದಲ್ಲಿ ಎಲ್ಲೆಲ್ಲಿ ಶಾಲಾ ಕೊಠಡಿಗಳ ಕೊರತೆ ಇದೆ ಎಂಬ ಮಾಹಿತಿ ತರಿಸಿಕೊಳ್ಳಲಾಗುತ್ತಿದೆ. ಎಲ್ಲ ರೀತಿಯ ಮೂಲಸೌಕರ್ಯಗಳನ್ನು ಒಳಗೊಂಡಂತೆ 8,500 ಕೊಠಡಿಗಳ ದುರಸ್ತಿ ಮಾಡಲಾಗುವುದು. ಮರದ ಕೆಳಗೆ ಮಕ್ಕಳನ್ನು ಕೂರಿಸಿ ಪಾಠ ಮಾಡುವಂತಿಲ್ಲ. ಕೊಠಡಿ ಕೊರತೆ ಇದ್ದರೆ ಪರ್ಯಾಯ ಕೊಠಡಿಗಳ ವ್ಯವಸ್ಥೆ ಮಾಡಿಕೊಂಡೇ ಪಾಠ ಮುಂದುವರಿಸಬೇಕು ಎಂದು ಈಗಾಗಲೇ ಸೂಚನೆ ನೀಡಿದ್ದೇನೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net