34.40 ಕ್ವಿಂಟಾಲ್​ ಅಕ್ರಮ ಪಡಿತರ ಅಕ್ಕಿ ವಶ

Crime Logo
Published on

ಹಾನಗಲ್ಲ: ಬುಲೇರೋ ವಾಹನದಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 76 ಸಾವಿರ ರೂ. ಮೌಲ್ಯದ 34.40 ಕ್ವಿಂಟಾಲ್​ಪಡಿತರ ಅಕ್ಕಿಯನ್ನು ಆಹಾರ ನಿರೀಕ್ಷಕರು ವಶಪಡಿಸಿಕೊಂಡ ಘಟನೆ ತಾಲೂಕಿನ ನಾಲ್ಕರ ಕ್ರಾಸ್​ ಬಳಿ ಗುರುವಾರ ನಡೆದಿದೆ.

ವ್ಯಕ್ತಿಯೊಬ್ಬ ಅನ್ನಭಾಗ್ಯ ಯೋಜನೆಯಡಿ ವಿತರಿಸುವ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ. ಈ ಕುರಿತು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಆಹಾರ ನಿರೀಕ್ಷಕ ಮಾರುತಿ ಚೋಟಣ್ಣನವರ ಪಡಿತರ ಅಕ್ಕಿ ಹಾಗೂ ವಾಹನ ವಶಪಡಿಸಿಕೊಂಡಿದ್ದಾರೆ. ಚಾಲಕ ಪರಾರಿಯಾಗಿದ್ದಾನೆ. ಈ ಕುರಿತು ಹಾನಗಲ್ಲ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net