ಕ್ವಿಟ್ ಇಂಡಿಯಾ ಚಳವಳಿ ಸ್ಮರಣೆ ಇಂದು

Quit india Movement
Published on

ಧಾರವಾಡ: ನಗರದ ಕರ್ನಾಟಕ ವಿದ್ಯಾವರ್ಧಕ ಸಂಘವು ಹಾವೇರಿಯ ಹುತಾತ್ಮ ಮೈಲಾರ ಮಹದೇವಪ್ಪ ರಾಷ್ಟ್ರೀಯ ಸ್ಮಾರಕ ಟ್ರಸ್ಟ್, ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ ಆ. 8ರಂದು ಸಂಜೆ 6 ಗಂಟೆಗೆ ಸಂಘದ ರಾ.ಹ. ದೇಶಪಾಂಡೆ ಸಭಾಭವನದಲ್ಲಿ ‘ಕ್ವಿಟ್ ಇಂಡಿಯಾ ಚಳವಳಿ ಸ್ಮರಣೆ’ ಕಾರ್ಯಕ್ರಮ ಆಯೋಜಿಸಿದೆ. ಕರ್ನಾಟಕ ವಿದ್ಯಾವರ್ಧಕ ಸಂಘದ ಉಪಾಧ್ಯಕ್ಷೆ ಪ್ರೊ. ಮಾಲತಿ ಪಟ್ಟಣಶೆಟ್ಟಿ ಅಧ್ಯಕ್ಷತೆ ವಹಿಸುವರು. ಮೈಲಾರ ಮಹದೇವಪ್ಪ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ಅಧ್ಯಕ್ಷ ಹಾಗೂ ಜಿಲ್ಲಾಧಿಕಾರಿ ರಘುನಂದನಮೂರ್ತಿ ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳುವರು. ಟ್ರಸ್ಟ್​ನ ಹಿರಿಯ ಸದಸ್ಯ ವಿ.ಎನ್. ತಿಪ್ಪನಗೌಡ್ರ ಪ್ರಾಸ್ತಾವಿಕವಾಗಿ ಮಾತನಾಡುವರು. ‘ಕ್ವಿಟ್ ಇಂಡಿಯಾ ಚಳವಳಿ ಮತ್ತು ಗಾಂಧಿ ಪ್ರಸ್ತುತತೆ’ ಕುರಿತು ಚಿಂತಕ ಡಾ. ಸಂಜೀವ ಕುಲಕರ್ಣಿ ಉಪನ್ಯಾಸ ನೀಡುವರು. ಹಾವೇರಿಯ ಜಿಲ್ಲೆಯ ಕಲಾವಿದರಿಂದ ದೇಶಭಕ್ತಿ ಗೀತೆಗಳು ಜರುಗಲಿವೆ ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net