

ಕೆ.ಆರ್.ಸಾಗರ: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ಹಾಗೂ ಕೆ.ಆರ್.ಸಾಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ವಿದ್ಯಾರ್ಥಿಗಳಿಗಾಗಿ ಇತ್ತೀಚೆಗೆ ಆಯೋಜಿಸಿದ್ದ ರಾಷ್ಟ್ರೀಯ ಆರೋಗ್ಯ ಅಭಿಯಾನ ಕಾರ್ಯಕ್ರಮ ಮತ್ತು ಯೋಜನೆಗಳ ವಿಷಯಗಳ ಕುರಿತು ರಸ ಪ್ರಶ್ನೆ ಸ್ಪರ್ಧೆಯಲ್ಲಿ ಯಶ್ವಂತ್ ಪ್ರಥಮ, ಮಾನ್ಯಾ ದ್ವಿತೀಯ, ಚಂದನ್ ತೃತೀಯ ಬಹುಮಾನ ಪಡೆದರು.
ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಡಾ.ವೇಣುಗೋಪಾಲ ರಸ ಪ್ರಶ್ನೆ ಸ್ಪರ್ಧೆ ಕಾರ್ಯಕ್ರಮದ ಉದ್ದೇಶ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಪ್ರಾಂಶುಪಾಲೆ ಇಂದಿರಾ ಅಧ್ಯಕ್ಷತೆ ವಹಿಸಿದ್ದರು. ತೀರ್ಪುಗಾರರಾಗಿ ಪ್ರಾಧ್ಯಾಪಕ ಡಾ.ಮೋಹನ್ ಕುಮಾರ, ಅಂಬುಜಾಕ್ಷಿ, ಲಲಿತಾಶ್ರೀ ಕಾರ್ಯ ನಿರ್ವಹಿಸಿದರು. ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಡಿ.ಬೆನ್ನೂರ, ತಾಲೂಕು ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಜಿ.ಮೋಹನ್, ಆರೋಗ್ಯ ನಿರೀಕ್ಷಣಾಧಿಕಾರಿ ರಮ್ಯಾ, ಐಕ್ಯೂಎಸ್ ಸಂಚಾಲಕ ಡಾ.ಶಿಲ್ಪಾಶ್ರೀ, ಸ್ಕೌಡ್ಸ್ ಮತ್ತು ಗೈಡ್ಸ್ ಅಧಿಕಾರಿ ಶೆರ್ಲಿ ಶುಭ, ಆಶಾ ಕಾರ್ಯಕರ್ತೆ ರೂಪಾ, ಜಯಲಕ್ಷ್ಮೀ ಹಾಜರಿದ್ದರು.