ಜು.30ರಂದು ಮದ್ದೂರಿನಲ್ಲಿ ರಸಪ್ರಶ್ನೆ ಸ್ಪರ್ಧೆ: ನಿಸರ್ಗ ನಗರ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಅಧ್ಯಕ್ಷ ಹುಲಿಗೆರೆಪುರ ಮಹದೇವು ಮಾಹಿತಿ

1 (3)
Published on

ಮಂಡ್ಯ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಜೀವನ ಚರಿತ್ರೆಯನ್ನೊಳಗೊಂಡ ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಮಹಾನಾಯಕ ಧಾರಾವಾಹಿಗೆ ಸಂಬಂಧಿಸಿದಂತೆ ಮದ್ದೂರು ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಜು.30ರಂದು ರಸಪ್ರಶ್ನೆ ಸ್ಪರ್ಧೆ ಆಯೋಜಿಸಲಾಗಿದೆ ಎಂದು ನಿಸರ್ಗ ನಗರ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಅಧ್ಯಕ್ಷ ಹುಲಿಗೆರೆಪುರ ಮಹದೇವು ತಿಳಿಸಿದರು.

ಅಂದು ಮಧ್ಯಾಹ್ನ 12 ಗಂಟೆಗೆ ಸ್ಪರ್ಧೆ ಆರಂಭಗೊಳ್ಳಲಿದೆ. ಧಾರಾವಾಹಿ ಆರಂಭದ ದಿನದಿಂದ 2023ರ ಜೂ.25ರವರೆಗೆ ಪ್ರಸಾರವಾಗಿರುವ ಸಂಚಿಕೆಗಳಿಗೆ ಸಂಬಂಧಿಸಿದಂತೆ ರಸಪ್ರಶ್ನೆ ನಡೆಸಲಾಗುವುದು. ವಿಜೇತರಿಗೆ 10 ಸಾವಿರ ರೂ(ಪ್ರ), 5 ಸಾವಿರ ರೂ (ದ್ವಿ), 3 ಸಾವಿರ ರೂ (ತೃ) ನಗದು ಬಹುಮಾನ ಹಾಗೂ ಪ್ರಮಾಣ ಪತ್ರ ನೀಡಲಾಗುವುದು. ಮೊದಲು ನೋಂದಣಿ ಮಾಡಿಸಿಕೊಂಡ ನೂರು ಜನರಿಗೆ ಮಾತ್ರ ಪ್ರವೇಶ. ಸ್ಪರ್ಧೆಯಲ್ಲಿ ಭಾಗವಹಿಸಲು ಯಾವುದೇ ವಯಸ್ಸಿನ ಮಿತಿ ಇಲ್ಲ. ಪುರುಷರು ಮತ್ತು ಮಹಿಳೆಯರು ಕೂಡ ಭಾಗವಹಿಸಬಹುದು. ಪ್ರವೇಶ ಉಚಿತವಾಗಿರಲಿದೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಮಧ್ಯಾಹ್ನ 1.30ಕ್ಕೆ ವೇದಿಕೆ ಸಮಾರಂಭವನ್ನು ಶಾಸಕ ಕೆ.ಎಂ.ಉದಯ ಉದ್ಘಾಟಿಸಲಿದ್ದಾರೆ. ದಲಿತ ಸಂಘರ್ಷ ಸಮಿತಿ ರಾಜ್ಯಾಧ್ಯಕ್ಷ ವೆಂಕಟಗಿರಿಯಯ್ಯ, ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷ ಸುರೇಶ್ ಕಂಠಿ, ಅಂಬೇಡ್ಕರ್ ಸೇವಾ ಸಮಿತಿಯ ಕೋಲಾರ ಸಂದೇಶ್, ಆರ್.ಕೆ ವಿದ್ಯಾಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ವಿನಯ್ ರಾಮಕೃಷ್ಣ, ಅಂತಾರಾಷ್ಟ್ರೀಯ ಜಾನಪದ ಗಾಯಕ ಅಮ್ಮ ರಾಮಚಂದ್ರ ಸೇರಿದಂತೆ ಹಲವು ಗಣ್ಯರು ಭಾಗವಹಿಸುವರು ಎಂದು ವಿವರಿಸಿದರು.

ನಿರ್ವಹಣಾ ಸಮಿತಿ ಸದಸ್ಯರಾದ ಕಾಳಯ್ಯ, ದೊರೆಸ್ವಾಮಿ, ಡಿ.ಕೆ.ಕೃಷ್ಣ, ಯೋಗೇಶ್, ಮೂರ್ತಿ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net