ಕನ್ನಡದ ಬಗ್ಗೆ ಜ್ಞಾನ ಹೆಚ್ಚಲು ರಸಪ್ರಶ್ನೆ ಸ್ಪರ್ಧೆ

upanyasa karyakrama
ಕನ್ನಡ ರಸಪ್ರಶ್ನೆ ಸ್ಪರ್ಧೆ ಮತ್ತು ಉಪನ್ಯಾಸ ಕಾರ್ಯಕ್ರಮ ನಡೆಯಿತು.
Published on

ವಿಜಯವಾಣಿ ಸುದ್ದಿಜಾಲ ಹೆಬ್ರಿ

ಕನ್ನಡ ಸಾಹಿತ್ಯ ಪರಿಷತ್ ಹೆಬ್ರಿ ತಾಲೂಕು ಘಟಕದ ವತಿಯಿಂದ 111ನೇ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಕನ್ನಡ ರಸಪ್ರಶ್ನೆ ಸ್ಪರ್ಧೆ ಮತ್ತು ಉಪನ್ಯಾಸ ಕಾರ್ಯಕ್ರಮ ಮುನಿಯಾಲು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬುಧವಾರ ನಡೆಯಿತು.

ಉದ್ಯಮಿ ಮುನಿಯಾಲು ಗೋಪಿನಾಥ ಭಟ್ ಮಾತನಾಡಿ, ಕನ್ನಡ ಸಾಹಿತ್ಯ ಪರಿಷತ್ತು ಹೆಬ್ರಿ ಘಟಕವು ಕನ್ನಡಕ್ಕಾಗಿ ಅನೇಕ ರೀತಿಯಲ್ಲಿ ಕೆಲಸ ಮಾಡುತ್ತಿರುವುದನ್ನು ಗಮನಿಸಿದ್ದೇನೆ. ವಿದ್ಯಾರ್ಥಿಗಳಲ್ಲಿ ಕನ್ನಡದ ಬಗ್ಗೆ ಜ್ಞಾನ ಮತ್ತು ಆಸಕ್ತಿ ಹೆಚ್ಚಿಸಲು ಇಂತಹ ಕಾರ್ಯಕ್ರಮಗಳು ಅಗತ್ಯ ಎಂದರು.

ಸಂಪನ್ಮೂಲ ವ್ಯಕ್ತಿ ಡಾ.ವಿದ್ಯಾಧರ ಹೆಗ್ಡೆ ಮಾತನಾಡಿ, ಕನ್ನಡ ಹೃದಯದ ಭಾಷೆಯಾಗಬೇಕು. ಅದನ್ನು ಎಂದೂ ಮರೆಯುವಂತಿಲ್ಲ. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಹೆಚ್ಚು ಹೆಚ್ಚು ಪುಸ್ತಕಗಳನ್ನು ಓದಬೇಕು. ಕೇವಲ ಹೊತ್ತು ಕಳೆಯದೆ ಅಧ್ಯಯನ ನಿರತನಾದರೆ ಉತ್ತಮವಾದುದುನ್ನು ಸಾಧಿಸಬಹುದು ಎಂದರು.

ಕಸಾಪ ಹೆಬ್ರಿ ತಾಲೂಕು ಘಟಕದ ಅಧ್ಯಕ್ಷ ಮುದ್ದೂರು ಶ್ರೀನಿವಾಸ ಭಂಡಾರಿ ಅಧ್ಯಕ್ಷತೆ ವಹಿಸಿದ್ದರು. ಉದ್ಯಮಿ ದಿನೇಶ ಪೈ ಕಾರ್ಯಕ್ರಮ ಉದ್ಘಾಟಿಸಿದರು. ಮುನಿಯಾಲು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಸುಧಾಕರ ಕೆ.ಜಿ. ಉಪಸ್ಥಿತರಿದ್ದರು. ವಿದ್ಯಾರ್ಥಿಗಳಿಗೆ ಕನ್ನಡ ರಸಪ್ರಶ್ನೆ ಸ್ಪರ್ಧೆ ನಡೆಸಿ ಬಹುಮಾನ ವಿತರಿಸಲಾಯಿತು.

ಕಸಾಪ ಗೌರವ ಕಾರ್ಯದರ್ಶಿ ಡಾ.ಪ್ರವೀಣ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ವೀಣಾ ಆರ್.ಭಟ್ ಸ್ವಾಗತಿಸಿದರು. ಮಹೇಶ ಹೈಕಾಡಿ ವಂದಿಸಿದರು. ಮಂಜುನಾಥ ಕೆ. ಶಿವಪುರ ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net